ಕಲಬುರಗಿ: ಸದೃಢ ದೇಶ ನಿರ್ಮಾಣವಾಗಬೇಕಾದರೆ ಯುವಕರು ಸದೃಢ ದೇಹಾರಾಗ್ಯ ಹೊಂದಿರಬೇಕು ಎಂದು ಗುಲ್ಬರ್ಗ ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ರಮೇಶ ಲಂಡನಕರ್ ಅಭಿಪ್ರಾಯಪಟ್ಟರು.
ಪದವಿಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ಚಿತ್ತಾಪುರವ ತಾಲ್ಲೂಕಿನ ರೇವಗ್ಗಿ ಸರ್ಕಾರಿ ಪದವಿ ಕಾಲೇಜು ಆಶ್ರಯದಲ್ಲಿ ನಗರದ ಹೊರ ವಲಯದ ಬುದ್ಧ ವಿಹಾರ ಆವರಣದ ಪಾಲಿ ಸಂಸ್ಥೆಯಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಬಾಲಕರ ಎನ್.ಎಸ್.ಎಸ್. ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಅಪೌಷ್ಠಿಕತೆ ನಿವಾರಣೆ ಮತ್ತು ಹಸಿವುಮುಕ್ತ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ಯುವಕರ ಮೇಲಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ- ಸಾಹಿತಿ ಶಿವರಂಜನ್ ಸತ್ಯಂಪೇಟೆ ಮಾತನಾಡಿ, ಬದಲಾಗಬೇಕಾಗಿರುವ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕುಗಳುನ್ನು ಕಸಿದುಕೊಳ್ಳುವ ಹುನ್ನಾರ ನಡೆದಿದ್ದು, ಒಂದು ರೀತಿಯಲ್ಲಿ ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡುವ ಮೂಲಕ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಯುವಕರು ಶಿಸ್ತು, ಶ್ರಮ, ವೈಚಾರಿಕತೆಯನ್ನು ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ್ದ ಜೇವರ್ಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮೊಹ್ಮದ್ ಅಲ್ಲಾವುದ್ದೀನ್ ಸಾಗರ್, ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಸವರಾಜ ಗಾಣೂರೆ, ಶರಣಬಸವೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಿ.ಸಿ. ಚವ್ಹಾಣ, ಗುವಿಗು ಸಿಂಡಿಕೇಟ್ ಮಾಜಿ ಸದಸ್ಯ ಈಶ್ವರ ಇಂಗನ್ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆ ಕಲಬುರಗಿ ವಿಭಾಗೀಯ ಅಧಿಕಾರಿ ಡಾ. ಚಂದ್ರಶೇಖರ ದೊಡ್ಡಮನಿ ಸಮಾರೋಪ ನುಡಿಗಳನ್ನಾಡಿದರು. ಶಿಬಿರಾಧಿಕಾರಿ ಶರೀಫ್ ಎಂ.ಎಫ್ ವರದಿ ವಾಚನ ಮಾಡಿದರು. ರೇವಗ್ಗಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಪಾಟೀಲ ಶಿವಾಜಿ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆಯಲ್ಲಿ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು. ಶಿಬಿರಾಧಿಕಾರಿಗಳನ್ನು ಸತ್ಕರಿಸಲಾಯಿತು. ಪಾಂಡು ಎಲ್. ರಾಠೋಡ್ ನಿರೂಪಿಸಿದರು. ಅಂಬಾರಾಯ ಹಾಗರಗಿ ಸ್ವಾಗತಿಸಿದರು. ಭಗವಾನ್ ಬಿರಾದಾರ ವಂದಿಸಿದರು.
ಡಾ. ಅಂಬಾರಾಯ, ಭೀಮರಾವ ಜಿ. ಗಿರಿ, ಡಾ. ಭಗವಂತರಾಯ ಬಳೂಂಡಗಿ, ಮೋನಯ್ಯ ಗೋನಾಲ, ಅಲ್ಲಾಪಟೇಲ್ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…