ಯಾದಗಿರಿ: ಸಹಕಾರ ಮತ್ತು ಹೊಂದಾಣಿಕೆ ಮನೋಭಾವ ಬರುವುದು ಎನ್‌ಎಸ್‌ಎಸ್‌ನಂತಹ ಶಿಬಿರಗಳಿಂದ ಈ ಶಿಬಿರದಲ್ಲಿ ನಾವು ಬದುಕಿನ ಹಲವು ಮಜಲುಗಳಲ್ಲಿ ಕಲಿಯಬೇಕಾದ ಘಟನೆಗಳನ್ನು ಕೂಡ ಕಲಿಯುತ್ತೇವೆ. ಇಲ್ಲಿ ನಾವು ಮೊದಲು ಕಲಿಯುವುದು ಶುಚಿತ್ವವೇ ಧೈವತ್ವ ಎನ್ನುವುದನ್ನು ಎನ್ನುವುದನ್ನು ಮರೆಯದಿರೋಣ ಎಂದು ಗುರುಮಠಕಲ್ ಬಾಲಕೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಲ್ಲಯ್ಯಸ್ವಾಮಿ ಹಿರೇಮಠ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಾದಗಿರಿ ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಎನ್‌ಎಸ್‌ಎಸ್ ಶಿಬಿರದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು. ರಾಷ್ಟ್ರಸೇವೆಯಲ್ಲಿ ನಮ್ಮದು ಒಂದು ಪಾತ್ರ ಇದೆ ಎನ್ನುವುದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ವರದಿಗಾರರಾದ ಮಹೇಶ ಕಲಾಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿ ಜೀವನದಲ್ಲಿ ನಮ್ಮ ಬದುಕಿಗೆ ಉಪಯೋಗವಾಗುವಂತಹ ಕೌಶಲ್ಯವನ್ನು ಕಲಿತುಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಶಂಕರಲಿಂಗಪ್ಪ ಗೂಳಿ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳು, ಶಿಸ್ತು, ಸಮಯ ಪ್ರಜ್ಞೆ ಅಳವಡಿಸಿಕೊಂಡಲ್ಲಿ ತಮ್ಮ ವಿದ್ಯಾರ್ಥಿ ಜೀವನವನ್ನು ಯಶಸ್ವಿಯಾಗಿ ಪೂರೈಸಿಕೊಂಡು ಉತ್ತಮ ಬದುಕಿಗೆ ಅಡಿಪಾಯ ಹಾಕುವಿರಿ. ಅದರ ಜೊತೆಗೆ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯ ಮನೋಭಾವವನ್ನೂ ಕೂಡ ನಿಮ್ಮ ಬದುಕಿನಲ್ಲಿ ಅಳವಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಉಪನ್ಯಾಸಕರಾದ ಮರೆಪ್ಪ, ಸುಭಾಷ ಮಾನೆಗಾರ, ದಶರಥ ಕೆ, ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಶಿಬಿರಾರ್ಥಿಗಳು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…