ಯಡ್ರಾಮಿ: ಫೆಬ್ರವರಿ ತಿಂಗಳಲ್ಲಿ ಯಡ್ರಾಮಿಯಲ್ಲಿ ನಡೆಯಲಿರುವ ಪ್ರಥಮ ತಾಲೂಕಾ ಜಾನಪದ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ನಾಟಕ ರಚನೆಕಾರ, ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರಾದ ಎಲ್ ಬಿ ಕೆ ಆಲ್ದಾಳ ಅವರನ್ನುಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು (ರಿ) ಯಡ್ರಾಮಿ ತಾಲೂಕಾ ಅಧ್ಯಕ್ಷ ನಾಗಪ್ಪ ಸಜ್ಜನ್ ಅವರು ತಿಳಿಸಿದ್ದಾರೆ.
ಪಟ್ಟಣದ ವಿರಕ್ತ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಈ ಕುರಿತಂತೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಸಮ್ಮೇಳನದಲ್ಲಿ ಜನಪದ ಸಂಸ್ಕೃತಿಯನ್ನು ಬಿಂಬಿಸುವ ಮೆರವಣಿಗೆ ಇರಲಿದೆ. ಇದರಲ್ಲಿ ರಾಜ್ಯದ ಅನೇಕ ಜಾನಪದ ಕಲಾ ತಂಡಗಳು ಹಾಗೂ ಸ್ಥಳೀಯ ಕಲಾ ತಂಡಗಳು ಭಾಗವಹಿಸಲಿವೆ.ಜಾನ ಪದ ವಸ್ತುಗಳ ಪ್ರದರ್ಶನವು ಇರಲಿದೆ. ಪ್ರಥಮ ಜನಪದ ಸಮ್ಮೇಳನದ ಸವಿನೆನಪಿಗಾಗಿ ಡಾ.ಗಿರೀಶ ರಾಠೋಡ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆಯನ್ನು ಹೊರತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಮುಖರಾದ ಮಹಾಲಿಂಗಪ್ಪಗೌಡ, ಸಿದ್ದನಗೌಡ ಮಾಲಿ ಪಾಟೀಲ,ಗುರು ಬಸ್ಸಪ್ಪ ಸಣ್ಣಳ್ಳಿ, ಎಲ್ ಬಿ ಕೆ ಆಲ್ದಾಳ, ಬಾಬಾಗೌಡ ಕುಳಗೇರಿ, ರೇವಣಸಿದ್ದಯ್ಯಾ ಪುರಾಣಿಕ,ಬಸ್ಸೆಟಪ್ಪ ವಾರದ, ಬಸವರಾಜ ಬೋರಗಿ, ಸಂತೋಷ ಕೊಡೆಕಲ್, ಸಾಹೇಬಗೌಡ, ಡಾ. ಕೆ.ಕೆ ದೇಸಾಯಿ, ಭೀಮರಾಯಗೌಡ ಹಿರೇಗೌಡ, ಯಲ್ಲಾಲಿಂಗ ಹರನಾಳ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…