ಕಲಬುರಗಿ: ಡಿಜಿಇಟಿ ಜಾರಿಗೆ ತರಲು ಉದ್ದೇಶಿಸಿರುವ ಆನ್ಲೈನ್ ಪರೀಕ್ಷಾ ಪದ್ದತಿ ಕೈ ಬಿಡಬೇಕು ಮತ್ತು ಪರೀಕ್ಷೆಯ ಶುಲ್ಕ ಏರಿಕೆ ಹಾಗೂ ಪರೀಕ್ಷಾ ಶುಲ್ಕಕ್ಕೆ ಜಿ.ಎಸ್.ಟಿ ಹಾಕಿರುವುದನ್ನು ರದ್ದುಪಡೆಸಬೇಕೆಂದು ಆಗ್ರಹಿಸಿ ಇಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಜಿಲ್ಲಾಧ್ಯಕ್ಷ ನಿಂಗಣ್ಣ ಜಂಬಗಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಆಗ್ರಹಿಸಿದರು.
ನಗರದ ಸರಕಾರಿ ಐ.ಟಿ.ಐ ಕಾಲೇಜಿನ ಆವರಣದಿಂದ ವಿವಿದ ಕಾಲೇಜಿನ ವಿದ್ಯಾರ್ಥಿಗಳು ಸೇರಿಕೊಂಡು ಬೃಹತ್ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಮೂಖಾಂತರ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಂಬಗಿ ಮಾತನಾಡಿ, ಲಕ್ಷಾಂತರ ಐಟಿಐ ತರಬೇತಿ ಪಡೆಯುತ್ತಿರುವವರು ಮತ್ತು ತರಬೇತಿದಾರರನ್ನು ಗೊಂದಲಕ್ಕೆ ತಳ್ಳಿದ್ದು, 2019ರ ವರ್ಷದ ಪರೀಕ್ಷಾ ಫಲಿತಾಂಶವು ಇನ್ನೂ ಹೊರಬಿದ್ದಿಲ್ಲ, ಸಪ್ಲಿಮೆಂಟರಿ ಪರೀಕ್ಷೆಗೆ ಕೊನೆಯ ದಿನಾಂಕವೂ ಮುಗಿದುಹೋಗಿದೆ, ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಮೊದಲ ಬಾರಿಗೆ ಐಟಿಐ ಪರೀಕ್ಷಾ ಶುಲ್ಕಕ್ಕೆ ಜಿಎಸ್ಟಿ ಹಾಕುವ ಪದ್ಧತಿ ಜಾರಿಗೆ ಬಂದಿದೆ ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಸಂಘಟನೆಯ ಎಐಡಿವೈಓ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ ಎಸ್. ಎಚ್, ಜಿಲ್ಲಾ ಉಪಾಧ್ಯಕ್ಷರಾಗಿ ಭೀಮಾಶಂಕರ ಪಾಣೆಗಾಂವ, ಈಶ್ವರ ಇ ಕೆ, ಶರಣು ವಚ್ಚಾ, ರಾಜಶೇಖರ ಮಾತೋಳಿ, ಅವಿನಾಶ, ಫಿರೋಜ್, ಸಮೀರ, ಪ್ರೇಮಕುಮಾರ, ಸಾಗರ, ಸುನಿಲಕುಮಾರ, ಸಚಿನ, ಶ್ರೀನಿವಾಸ, ವಿಶಾಲ ಪೇಠಶಿರೂರ ಸೇರಿದಂತೆ ವಿವಿದ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…