ಕಲಬುರಗಿ: ಕಮಲಾಪುರ ಸಮೀಪದ ಬೆಳಕೋಟಾ ಕೆರೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಾಡಲು ಹೋಗಿ ಕರೆಯಲ್ಲಿ ಮುಳುಗಿ ಮೃತಪಟ್ಟಿರುವ ಧಾರುಣ ಘಟನೆ ಮಹಾಗಾಂವ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಮಣ ಭೀಮರಾಯ್ಯ ದೊಣ್ಣೂರ್ (14), ಮಂಜುನಾಥ್ ಚನ್ನೂಯಾದವಾಡ್ (15) ಹಾಗೂ ಶೂಭಂ ಶಶೂರ್ ಹುಸುರ್ (15) ಮೃತಪಟ್ಟ ದುರ್ದೈವಿಗಳು, ಮೂವರು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದ್ದು, ಸಮೀಪದ ಪ್ರತಿಷ್ಠಿತ ಸತ್ಯಸಾಯಿ ಪ್ರೌಢ ಶಾಲೆಯ ಶಾಲೆಯ ಮಕ್ಕಳು ಎನ್ನಲಾಗುತ್ತಿದೆ.
ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಪ್ರೌಢ ಶಾಲೆಯಿಂದ ಪಿಕ್ ನಿಕ್ ಎಂದು ಕಲಬುರಗಿಗೆ ಬಂದಿದ್ದು, ಒಟ್ಟು 96 ಮಕ್ಕಳು ಪ್ರವಾಸದ ಮೇಲೆ ಬಂದಿದ್ದಾರೆ ಎನ್ನಾಲಾಗಿದೆ.
ಇಂದು ಮಧ್ಯಾಹ್ನ ಗಂಡೋರಿ ನಾಲಾ ಸಮೀಪದ ಬೆಳಕೋಟಾ ಕೆರೆ ವೀಕ್ಷಣೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…