ಕಲಬುರಗಿ: ಬೆಲೆ ಏರಿಕೆ ತಡೆಗಟ್ಟಲು ವಿಫಲ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಜ. ೮ ರಂದು ಕರೆನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಮುಷ್ಕರದಲ್ಲಿ ಭಾಗಿಯಾಗುತ್ತದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಶಾಂತಾ ಘಂಟಿ ತಿಳಿಸಿದರು.
ಅವರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದೇಶದಲ್ಲಿ ಈರುಳ್ಳಿ ಬೆಲೆ, ಪೆಟ್ರೋಲೆ ಬೆಲೆ ನಿಯಂತ್ರಣದಲಿಲ್ಲ. ಬೆಲೆ ಏರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ದುಡಿಯುವ ಕಾರ್ಮಿಕ ವರ್ಗಕ್ಕೆ ಕನಿಷ್ಠ ವೇತನ ರೂ. ೨೧ ಸಾವಿರ ನಿಗದಿಪಡಿಸಬಗೇಕು. ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದುಪಡಿಸಬೇಕು. ಸರಕಾರ ಹಾಗೂ ಅರೇ ಸರಕಾರದಲ್ಲಿ ದುಡಿಯುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸಬೇಕು. ಸಾರ್ವಜನಿಕ ಉದ್ಯಮಗಳ ಖಾಸಗೀಕರಣ, ಆಶಾ, ಅಂಗನವಾಡಿ ಹಾಘೂ ಅಕ್ಷರ ದಾಸೋಹ ಸೇರಿದಂತೆ ಇತರೆ ಯೋಜನೆಯ ನೌಕರರ ಖಾಯಂ, ರೈತರ ಕಲ್ಯಾಣಕ್ಕಾಗಿ ಕಾನೂನು ರೂಪಿಸಲು, ಡಾ. ಎಂ.ಸೆಸ್ ಸ್ವಾಮಿನಾಥ ಆಯೋಗದ ವರದಿ ಅನುಸರಿಸಿ ಭೂಮಿ ಬಾಡಿಗೆ, ಕುಟುಂಬದ ಶ್ರಮ ನಿರ್ಧರಿಸಿ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ತೊಗರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗಧಿ ಹಾಗೂ ರೈತರ ಬೆಳೆದಷ್ಟು ಖರೀದಿ, ರೈತರ ಬೆಳೆಗಳಿಗೆ ಸಬ್ಸಿಡಿ ಮುಂದುವರೆಕೆ, ಉದ್ಯೋಗ ಖಾತ್ರಿ ಕೂಲಿ ಮುಂದುವರೆಕೆ, ಕಟ್ಟಡ ಕಾರ್ಮಿಕ ಸೇರಿದಂತ ಅಸಂಘಟಿತ ವಲಯದವರಿಗೆ ಪಿಂಚಣಿ ರೂ. ೧೦ ಸಾವಿರ, ಸರಕಾರಿ ನೌಕರರ ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಮುಂದುರವರೆಸಲು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಜ. ೮ ರಂದು ಜಿಲ್ಲೇ ಕೇಂದ್ರದಲ್ಲಿ ಹಾಗೂ ತಾಲೂಕ ಕೇಂದ್ರಗಳಲ್ಲಿ ನಡೆಯುತ್ತದೆ. ಅಂದು ನಡೆಯುವ ಮುಷ್ಕರಕ್ಕೆ ಸಾರ್ವಜನಿಕರು, ವ್ಯಾಪಾರಸ್ಥರು, ಅಟೋ ಚಾಲಕರು ಮತ್ತು ದುಡಿಯು ಕಾರ್ಮಿಕ ವರ್ಗ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗೌರಮ್ಮ ಪಾಟೀಲ, ಗಂಗಮ್ಮ ಬಿರಾದಾರ, ಹುಲಸಂಬಿ, ಗುಜ್ಜಾಬಾಯಿ ಬಿರಾದಾರ, ಶೀಲಾ ಕುಲ್ಕರ್ಣಿ, ಶೇಕಮ್ಮ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…