ಕೃಷಿ ಅನುವುಗಾರರ ವೇತನ ಹೆಚ್ಚಳಕ್ಕಾಗಿ ಜ. 7 ರಿಂದ ಅನಿರ್ದಿಷ್ಟ ಧರಣಿ: ಹಿರೇಮಠ

ಕಲಬುರಗಿ: ರಾಜ್ಯ ಕೃಷಿ ಇಲಾಖೆಯಲ್ಲಿ ರೈತ ಅನುವುಗಾರರಾಗಿ(ತಾಂತ್ರಿಕ ಉತ್ತೇಜನಕಾರ) ಸೇವೆ ಸಲ್ಲಿಸುವತ್ತಿರುವ ನೌಕರರ ವೇತನ ಹೆಚ್ಚಳಕ್ಕಾಗಿ ಜ. ೭ ರಿಂದ ಬೆಂಗಳೂರಿನ ಫ್ರೀಡ್ಂ ಪಾರ್ಕ್‌ನಲ್ಲಿ ಅನಿರ್ದಿಷ್ಟಿತ ಧರಣ ಸತ್ಯಗ್ರಹ ನಡೆಸಲಾಗುವದು ಎಂದು ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ತಿಳಿಸಿದರು.

ಪತ್ರಿಕಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ೨೦೦೮-೦೯ರಿಂದ ರೈತರಿಗೆ ತಾಂತ್ರಿಕ ಉತ್ತೇಜಕರಾಗಿ ಕೃಷಿ ಚಟುವಟಿಕೆಯಲ್ಲಿ ರೈತರಿಗೆ ಉತ್ತಮ ಮಾರ್ಗದರ್ಶನವನ್ನು ನೀಡುತ್ತಿರುವ ಅನುವುಗಾರರು ಇಂದು ವೇತನ ಸರಿಯಾಗಿ ಸಿಗದೇ ಇರುವ ಕಾರಣ ಅನೇಕ ಸಂಕಷ್ಟದಲ್ಲಿ ಇದ್ದಾರೆ. ರಾಜ್ಯದಲ್ಲಿ ಸುಮಾರು ೬೫೦೦ ಜನ ಕಡಿಮೆ ವೇತನದಲ್ಲಿ ಕೃಷಿಕರೊಂದಿಗೆ ಕೆಲಸ ಮಾಡುವದು ಕಷ್ಟದಾಯಕವಾಗಿದೆ. ಅವರ ಕುಟುಂಬದ ನಿರ್ವಹಣೆ ಮಾಡುಬೇಕಾದರೆ ಕಠಿಣ ಪರಿಸ್ಥಿತಿ ಎದುರಾಗುತ್ತಿದೆ.

ಕೃಷಿ ಇಲಾಖೆಯಲ್ಲಿ ಸಹಾಯಕರ ಹುದ್ದೆ ಇರುವದಿಲ್ಲ ರಾಜ್ಯದಲ್ಲಿ ಸುಮಾರು ೪೦ಲಕ್ಷ ಕೃಷಿಕರು ಇದ್ದಾರೆ ಅವರ ಹೊಲಗಳಿಗೆ ಹೋಗಿ ತಾಂತ್ರಿಕವಾಗಿ ಹೊಸ ಕೃಷಿ ವಿಧಾನಗಳನ್ನು ಅನುಸರಿವು ಕ್ರಮಗಳ ಕುರಿತು ಸರಕಾರದ ಯೋಜನೆಗಳನ್ನು ಅನುಷ್ಠಾನ ಹೇಗೆ ಮಾಡಬೇಕೆಂಬಿತ್ಯಾದಿ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡುತ್ತಾರೆ. ಆದರೆ ಇವರಿಗೆ ಕೃಷಿ ಇಲಾಖೆಯಿಂದ ಯಾವುದೇ ಭತ್ಯೆ ಸೌಲಭ್ಯವಿಲ್ಲ. ಮಣ್ಣು ಪರೀಕ್ಷೆ, ಬೀಜೋಪಚಾರ, ಕೀಟಗಳ ನಿಯಂತ್ರಣ ಸೇರಿದಂತೆ ಸಮಗ್ರ ಮಾಹಿತಿಯನ್ನುರೈತರಿಗೆ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿ ಮಾಹಿತಿ ನೀಡುತ್ತಾರೆ ಹಾಗೂ ಸರಕಾರ ಮತ್ತು ರೈತರ ನಡುವೆ ಕೊಂಡಿಯಂತೆ ಕೆಲಸ ಮಾಡುತ್ತಾರೆ ಎಂದು ವಿವರಿಸಿದರು.

ಈಗಾಗಲೇ ಅನೇಕ ಬಾರಿ ವೇತನ ಹೆಚ್ಚಳಕ್ಕಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಸರಕಾರದ ವತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಹಿಂದಿನ ಸರಕಾರ ರಾಜ್ಯದಲ್ಲಿ ಇರುವ ರೈತ ಅನುವುಗಾರರ ಸಮಗ್ರ ಮಾಹಿತಿಯನ್ನು ತರೆಸಿಕೊಂಡು ಅವರಿಗಾಗಿ ಹೆಚ್ಚುವಾರಿ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಪ್ರಾಸ್ತಾವನೆ ಸಲ್ಲಿಸಿದೆ. ಆದರೆ ಆರ್ಥಿಕ ಇಲಾಖೆಯಿಂದ ಯಾವುದೇ ಮಾಹಿತಿ ದೊರಕುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿ ಈ ಕುರಿತಿ ಕೃಷಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಯವರಿಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲ್ಲವಾದರಿಂದ ಅನಿವಾರ್ಯವಾಗಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.

ಜ. ೭ ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ಮೂಲಕ ತೆರಳಿ ರಾಜ್ಯದ ಎಲ್ಲಾ ಎಲ್ಲಾ ರೈತ ಅನುವುಗಾರರೊಂದಿಗೆ ಅನಿರ್ಧಿಷ್ಠಾವದಿ ಧರಣಿ ನಡೆಸಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ಅನುವುಗಾರರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಗದೀಶ ಜಿಡಗಾ, ರಾಜಶೇಖರ ಚಿಂಚೋಳಿ, ಸಿದ್ರಾಮ ಫಿರೋಜ್ ಪಟೇಲ, ಮಹಾಂತಪ್ಪ ಬಸಯ್ಯ ಸ್ವಾಮಿ ಹಾಗೂ ಇತರರು ಇದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 hour ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

2 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

15 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

17 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420