ಕಲಬುರಗಿ, ಚಿತ್ತಾಪುರ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿ ಸುಟ್ಟಿರುವ ಕ್ರಮ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಉಮಾಕಾಂತ್ ಹಳ್ಳೆ ಮುಖಾಂತರ ಕರ್ನಾಟಕ ಸರ್ಕಾರ ಮುಖ್ಯ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಮಹಾರಾಷ್ಟ್ರದಲ್ಲಿ ಶಿವಸೇನೆಯ ಸರ್ಕಾರ ಕನ್ನಡಿಗರ ಮೇಲೆ ವಿನಾಕಾರಣ ದಬ್ಬಾಳಿಕೆ ನಡೆಸುತ್ತಿರುವುದು ಖಂಡನೀಯ. ಕರ್ನಾಟಕ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ ಜತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಈ ವಿಚಾರವನ್ನು ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು. ಇಲ್ಲದಿದ್ದರೆ ಶಿವಸೇನೆ ಎಂಇಎಸ್ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಹಾಗೂ ಕನ್ನಡಿಗರ ಮತವನ್ನು ಪಡೆದು ಕರ್ನಾಟಕದ ವಿಧಾನಸಭೆಗೆ ಆಯ್ಕೆಯಾದ ನಾಡದ್ರೋಹಿ ಬಿಜೆಪಿ ಶಾಸಕ ಮರಾಠಿಗರನ್ನು ಕನ್ನಡಿಗರ ಮೇಲೆ ಎತ್ತುಕಟ್ಟಲು ಮುಂದಾಗಿರುವುದು ನಿಜಕ್ಕೂ ನಾಚಿಕೆ ಗೇಡಿನ ಸಂಗತಿ ಇಂತಹ ನಾಡದ್ರೋಹಿಗಳ ಕೃತ್ಯವನ್ನು ಕರವೇ ಉಗ್ರವಾಗಿ ಖಂಡಿಸುತ್ತದೆ. ಕೂಡಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಅವರ ಮೇಲೆ ಭಾರತೀಯ ದಂಡ ಸಂಹಿತೆ ಕಲಂ 120(ಬಿ) ಅಡಿ ಪ್ರಕರಣ ದಾಖಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕಲ್ಲೂರಕರ್, ಕರವೇ ಪ್ರಧಾನ ಕಾರ್ಯದರ್ಶಿ ಮಹಾದೇವ ತೇಲ್ಕೂರ, ನಗರ ಅಧ್ಯಕ್ಷ ರಾಹುಲ್ ಶಾಸ್ತ್ರಿ, ಐಲರೆಡ್ಡಿ,ಯಂಕಪ್ಪ, ಶರಣು ಪೂಜಾರಿ, ಈರಣ್ಣ ಕೊಳ್ಳಿ, ಸಂತೋಷ್ ಕೊಂಕನಹಳ್ಳಿ, ಹಣಮಂತ, ಮಲ್ಲಯ್ಯ ಸ್ವಾಮಿ, ದೇವಪ್ಪ, ಅಕ್ಬಲ್, ದುರ್ಜನ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…