ಸುರಪುರ: ನಗರದ ಗೃಹ ರಕ್ಷಕ ದಳ ತಾಲೂಕು ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಗೃಹ ರಕ್ಷಕದಳ ಕಚೇರಿಯಲ್ಲಿ ಈ ಬಾರಿ ಹೊಸ ವರ್ಷಾಚರಣೆಯನ್ನು ವಿಕಲಚೇತನರೊಂದಿಗೆ ವಿಶಿಷ್ಠವಾಗಿ ಆಚರಿಸಿದರು.
ಡಿ೩೧ ರಂದು ರಾತ್ರಿ ೧೨ ಗಂಟೆಗೆ ವಿಕಲಚೇತನ ವ್ಯಕ್ತಿಯಿಂದ ಕೇಕ್ ಕತ್ತರಿಸಿ ತಿನ್ನಿಸುವ ಮೂಲಕ ಹೊಸ ವರ್ಷಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಘಟಕಾಧಿಕಾರಿ ಯಲ್ಲಪ್ಪ ಹುಲಿಕಲ್ ಮಾತನಾಡಿ ವಿಕಲಚೇತನರನ್ನು ಕೀಳಾಗಿ ಕಾಣಬಾರದು ಸಮಾಜದಲ್ಲಿ ಅವರನ್ನು ಗೌರವದಿಂದ ಕಾಣವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು ಅಲ್ಲದೆ ವಿಕಲಚೇತನರ ಬಗ್ಗೆ ಅನುಕಂಪ ತೋರಿಸುವುದು ಮಾತ್ರವಲ್ಲದೆ ಸಮಾಜದಲ್ಲಿ ಅವರನ್ನು ಗುರುತಿಸಿ ಅವಕಾಶ ಕಲ್ಪಿಸಿಕೊಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಸೀನಿಯರ್ ಪ್ಲಾಟೂನ್ ಕಮಾಂಡರ್ ವೆಂಕಟೇಶ್ವರ ಸುರಪುರಕರ, ಪ್ಲಾಟೂನ್ ಕಮಾಂಡರ್ ರಮೇಶ ಅಂಬೂರೆ, ಪಂಚ ಕಮೀಟಿ ಅಧ್ಯಕ್ಷ ಭೀಮರಾಯ ಹುಲಿಕಲ್, ಮಲ್ಲಿಕಾರ್ಜುನ ಗುರಗುಂಟಿ ಸೇರಿದಂತೆ ಪೋಲಿಸ್ ಹಾಗೂ ಗೃಹ ರಕ್ಷಕದಳ ಸಿಬ್ಬಂದಿಗಳು ಭಾಗವಹಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…