ಕಲಬುರಗಿ: ಇಲ್ಲಿನ ಹೈಕ ಜನಪರ ಸಂಘರ್ಷ ಸಮಿತಿ ವತಿಯಿಂದ ನಾಳೆ ೩೭೧(ಜೆ) ತಿದ್ದುಪಡಿ ಪಡೆದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಸಮಸ್ಯೆ ಸವಾಲುಗಳು ಹಾಗೂ ಅಭಿವೃದ್ಧಿ ಕುರಿತು ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.
ನಗರದ ಹಿಂದಿ ಪ್ರಚಾರ ಸಭಾ ಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ನಡೆಯಲಿರುವ ಈ ಸಭೆಗೆ
ಮಾಜಿ ಸಚಿವ ರೆವೂನಯಕ ಬೆಳಮಗಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಮಾಜಿ ಶಾಸಕ ಜುಲ್ಫೇಕರ್ ಹಾಶ್ಮಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ, ಅಲ್ಲಮಪ್ರಭು ಪಾಟೀಲ ಅತಿಥಿಗಳಾಗಿ ಆಗಮಿಸಲಿದ್ದು, ಚರ್ಚೆಯಲ್ಲಿ ಅಬ್ದುಲ್ ರಜಾಕ್ ಉಸ್ತಾದ, ಸಂಗೀತಾ ಕಟ್ಟಿಮನಿ, ಬಸವರಾಜ ಕಮನೂರ ಮತ್ತಿತರರು ಭಾಗವಹಿಸಲಿದ್ದಾರೆ.
ಇದೇವೇಳೆಯಲ್ಲಿ ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆಯ ಝಡ್, ಆರ್. ಯು.ಸಿ.ಸಿ.ಐ ನೂತನ ಸದಸ್ಯ ಪ್ರಕಾಶ ಮಂಡೋಕ್, ರಂಗಯಣ ನೂತ ನಿರ್ದೇಶಕ ಪ್ರಭಾಕರ ಜೋಶಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯ ಸುರೇಶ ಬಡಿಗೇರ್ ಅವರನ್ನು ಸನ್ಮಾನಿಸಲಗುವುದು ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…