ಕಲಬುರಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮುಖ ಪೇದೆ ಮೃತ ಪಟ್ಟಿರುವ ಘಟನೆ ಸಂಭವಿಸಿದೆ.
ಚಂದ್ರಕಾಂತ ಅಂಕಲಗಿ (54) ಮೃತಮುಖ್ಯ ಪೇದೆ. ಅಂಕಲಗಾ ಗ್ರಾಮದ ನಿವಾಸಿ. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತ ಕಾಣಿಸಿಕೊಂಡ ಪರಿಣಾಮ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 2 ಗಂಡು, 1 ಹೆಣ್ಣು ಮಕ್ಕಳಿದ್ದಾರೆ.
ಮೃತರ ಚಂದ್ರಕಾಂತ ಅವರ ಅಂತ್ಯಕ್ರಿಯೆ ಸ್ವಗ್ರಾಮ ಅಂಕಲಗಾ ಗ್ರಾಮದಲ್ಲಿ 5 ಗಂಟೆಗೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಮುಖ ಪೇದೆ ಸಾವಿಗೆ ಪೊಲೀಸ್ ಇಲಾಖೆಯಿಂದ ಸಂತಾಪ
ಡಿ.ವೈ.ಎಸ್ಪಿ ಟಿ.ಎಸ್. ಸುಲ್ಫಿ, ಸಿ.ಪಿ.ಐ ಮಹಾಂತೇಶ ಪಾಟೀಲ್, ಪಿ.ಎಸ್.ಐ ಪ್ರಭಾಕರ ಪಾಟೀಲ್, ರೇವೂರ ಪಿ.ಎಸ್.ಐ ಮಲ್ಲಣ್ಣ ಯಲಗೋಡ, ಗಾಣಗಾಪೂರ ಪಿ.ಎಸ್.ಐ ಕೆ. ನಾಗರತ್ನ, ಎ.ಎಸ್.ಐ ರಾಜಶೇಖರ ಜವಳಿ, ಗುಪ್ತವಾರ್ತೆ ಇಲಾಖೆ ಮಾಹಿತಿ ಸಿಬ್ಬಂದಿ ಅರವಿಂದ ಆಲೇಗಾಂವ, ಸೋಂದೆಸಾಬ ದೇವಣಗಾಂವ, ಚಂದ್ರಶಾ ದೇಗಿನಾಳ, ಚಿದಾನಂದ ಬಿರಾದಾರ, ಭೀಮಾಶಂಕರ ಜಮಾದಾರ, ಯಲ್ಲಪ್ಪ ಉಡಗಿ, ರಜಿಯಾ ಬೇಗಂ, ಭಾರತಿ ಬಡಿಗೇರ ಸೇರಿದಂತೆ ಸಿಬ್ಬಂದಿ ವರ್ಗ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…