ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಡಾ.ಜಯಶ್ರೀ ದಂಡೆಯವರ ಸರಳ ಜೀವನ ಇನ್ನೊಬ್ಬರಿಗೆ ಮಾರ್ಗದರ್ಶನವಾಗಿದೆ ಎಂದು ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಕಲ್ಯಾಣರಾವ ಜಿ.ಪಾಟೀಲ ಅಭಿಪ್ರಾಯ ಪಟ್ಟರು.
ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಭಾನುವಾರ ಮಹಾವಿದ್ಯಾಲಯ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಜಿಲ್ಲೆಯ ಸಾಹಿತ್ಯ ಸಾಧಕರು ಉಪನ್ಯಾಸ ಮಾಲಿಕೆ-೩ ನ್ನು ಉದ್ಘಾಟಿಸಿ ಮಾತನಾಡಿದರು. ಡಾ. ಜಯಶ್ರೀ ದಂಡೆ ಮತ್ತು ಡಾ.ವೀರಣ್ಣ ದಂಡೆಯವರು ಸಾಹಿತ್ಯ ಲೋಕಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಡಾ.ಜಯಶ್ರೀ ದಂಡೆಯವರು ಸುಮಾರು ೫೦ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಅವರ ಒಂದೊಂದು ಕೃತಿಯು ಜನಮಾನಸಕ್ಕೆ ಹತ್ತಿರವಾಗಿವೆ. ಸಾಹಿತ್ಯಭಿರುಚಿ ಇರುವ ವಿದ್ಯಾರ್ಥಿಗಳಿಗೆ ಹೊಸ ಸಾಹಿತ್ಯವನ್ನು ತಿಳಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಲ್ಲಿದ್ದ ಡಾ.ಜಯಶ್ರೀ ದಂಡೆ ಅವರು ಮಾತನಾಡಿ, ತಮ್ಮ ಸಾಧನೆಯನ್ನು ಗುರುತಿಸಿ ಉಪನ್ಯಾಸ ಮಾಲಿಕೆ ಹಮ್ಮಿಕೊಂಡಿರುವುದು ಸಂತಸವಾಗಿದೆ. ವಿದ್ಯಾರ್ಥಿನಿಯರು ಅಭ್ಯಾಸದೊಂದಿಗೆ ಸಾಹಿತ್ಯ ಪುಸ್ತಗಳನ್ನು ಆಳವಾಗಿ ಓದಬೇಕು, ತಿಳಿದುಕೊಳ್ಳಬೇಕು ಮತ್ತು ಬರೆಯಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿ, ವಿದ್ಯಾರ್ಥಿನಿಯರು ಜೀವನದಲ್ಲಿ ಶಿಸ್ತು, ಶ್ರದ್ಧೆ, ಸಮಯಪಾಲನೆ, ಪ್ರಾಮಾಣಿಕತೆ, ಪ್ರಯತ್ನಗಳಿದ್ದಾರ ಮಾತ್ರ ಯಶಸ್ಸು ಹೊಂದಲು ಸಾಧ್ಯವಾಗುತ್ತದೆ. ಹಾಗೆಯೇ ಡಾ.ಜಯಶ್ರೀ ದಂಡೆ ಅವರು ಸಹ ಈ ಎಲ್ಲವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತುಂಗಕ್ಕೆ ಏರಿದ್ದಾರೆ. ಇಂತಹ ಸಾಹಿತಿಗಳ ಕುರಿತು ಪಠ್ಯಪುಸ್ತಕದಲ್ಲಿ ಅಳವಡಿಸಿದಾಗ ವಿದ್ಯಾರ್ಥಿಗಳಿಗೆ ಅವರ ಜೀವನ, ಸಾಧನೆ ತಿಳಿಯುತ್ತದೆ. ಈ ಭಾಗದ ವಿದ್ಯಾರ್ಥಿಗಳು ಶ್ರೇಷ್ಠ ಸಾಹಿತಿಗಳಾಗಬೇಕೆಂದು ಸದಾ ಚಿಂತಿಸುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರು ಅನೇಕ ಸಾಹಿತಿಗಳ ಪುಸ್ತಕಗಳನ್ನು ಒದಗಿಸಿದ್ದಾರೆ ಎಂದು ಹೇಳಿದರು.
ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ವಿಜ್ಞಾನ ಶಿಕ್ಷಕ ಪ್ರಸಾದ ಜಿ.ಕೆ. ಅವರು ಡಾ.ಜಯಶ್ರೀ ದಂಡೆ ಅವರ ಜೀವನ, ಸಾಧನೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ರಾಜೇಂದ್ರ ಝಳಕಿ, ಆನಂದ ನಂದೂರಕರ್, ಗೌರವ ಕೋಶಾಧ್ಯಕ್ಷ ಪ್ರಶಾಂತ ಕೊರಳ್ಳಿ, ಮಹಾವಿದ್ಯಾಲಯದ ಡಾ.ಸಿದ್ದಮ್ಮ ಗುಡೇದ್, ಡಾ. ಶಾಂತಲಾ ನಿಷ್ಠಿ, ಡಾ. ಇಂದಿರಾ ಶೇಟಕಾರ, ಪ್ರೊ. ಸಾವಿತ್ರಿ ಜಂಬಲದಿನ್ನಿ, ಡಾ.ಎನ್.ಎಸ್.ಹೂಗಾರ, ಪ್ರೊ. ಜಾನಕಿ ಹೊಸುರ, ಕೃಪಾಸಾಗರ ಗೊಬ್ಬುರ, ಶ್ರೀಮತಿ ಶ್ರೀಮತಿ ಅನಿತಾ ಗೊಬ್ಬುರ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಲಬುರಗಿಯ ದಕ್ಷಿಣ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅಪ್ಪಾಸಾಹೇಬ ಕುಲಕರ್ಣಿ ಅವರು ಪ್ರಾಸ್ತಾವಿಕ ಮಾತನಾಡಿದರು. ಡಾ.ಪುಟ್ಟಮಣಿ ದೇವಿದಾಸ ಸ್ವಾಗತಿಸಿದರು. ಡಾ. ಸೀಮಾ ಪಾಟೀಲ ಪಾರ್ಥಿಸಿದರು. ಬಾಬು ಎಂ. ಜಾಧವ ನಿರೂಪಿಸಿದರೆ, ಶ್ರೀಮತಿ ವಿಜಯಲಕ್ಷ್ಮೀ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…