ಕುಣಿಗಲ್ : ತಂದೆ ತಾಯಂದರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ನಮ್ಮದೇಯಾದ ಸಂಸ್ಕಾರ ಸಂಸ್ಕೃತಿಯನ್ನು ಬೆಳೆಸಬೇಕು, ಇಲ್ಲದಿದ್ದರೆ ನಿಮ್ಮ ಮಕ್ಕಳು ನಮ್ಮಿಂದ ದೂರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಪೋಷಕರಿಗೆ ಎಚ್ಚರಿಕೆ ನೀಡಿದರು.
ತಾಲ್ಲೂಕಿನ ಯಡಿಯೂರು ಹೋಬಳಿ ಕಗ್ಗೆರೆ ತೋಂಟದ ಸಿದ್ದಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಎರಡನೇ ವರ್ಷದಶ್ರೀ ಸಿದ್ದಲಿಂಗೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು ಇತ್ತೀಚಿನ ದಿನಗಳಲ್ಲಿವಿದ್ಯಾಭ್ಯಾಸದ ಜೊತೆಗೆ ಬೆಳೆದು ನಿಂತಿರುವ ಮಕ್ಕಳು ಪೋಷಕರಿಂದ ದೂರವಾಗು ತ್ತಿರುವುದನ್ನು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಸಂಸ್ಕಾರ ಸಂಸ್ಕೃತಿ ಎಂಬುದನ್ನು ಮರೆಯ ಬಾರದು ಎಂದರು.
ಪೋಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರೀತಿ ವಿಶ್ವಾಸಗಳನ್ನು ತುಂಬಬೇಕು ಅಪ್ಪ ಅಮ್ಮ ಎಂಬ ಭಾವನೆ ಬರುವ ರೀತಿಯಲ್ಲಿ ಮಕ್ಕಳನ್ನು ಬೆಳೆಸಿ ಪೋಷಣೆ ಮಾಡಬೇಕು ಎಂದ ಅವರು ಕುಟುಂಬದ ತಾಯಿ ಮನಸ್ಸು ಮಾಡಿದರೆ ಕುಟುಂಬ ಉದ್ದಾರ ಆಗುತ್ತದೆ ಇದರ ಜೊತೆಯಲ್ಲಿ ಸಮಾಜವೂ ಉದ್ಧಾರವಾಗು ವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಇತ್ತೀಚಿನ ಯುವಕರು ಹೆಚ್ಚು ಹೆಚ್ಚು ವಿದ್ಯಾವಂತರಾಗುತ್ತಿದ್ದಾರೆ ಆದರೆ ತಂದೆ ತಾಯಿಯಿಂದದೂರ ಉಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ನೀವು ಎಷ್ಟೇ ವಿದ್ಯಾವಂತರಾಗಿ, ಹಣವಂತರಾಗಿ, ನೀವು ನಿಮ್ಮ ಹಿರಿಯರ ಸೇವೆ ಮಾಡದಿದ್ದರೆ ನಿಮ್ಮ ಮಕ್ಕಳು ನಿಮ್ಮ ಸೇವೆಯನ್ನು ಯಾವುದೇ ಕಾರಣಕ್ಕೂ ಮಾಡುವುದಿಲ್ಲ ಎಂಬುದನ್ನು ಮರೆಯ ಬಾರದು ಎಂದು ಎಚ್ಚರಿಸಿದರು. ಮನುಷ್ಯನಾದವನಿಗೆ ಹಣಕ್ಕಿಂತ ಹೃದಯ ಶ್ರೀಮಂತಿಕೆ ಇರಬೇಕು ಎಂದ ಅವರು ಶ್ರೀ ತೋಂಟದ ಸಿದ್ಧಲಿಂಗೇಶ್ವರರು ನಡೆದು ಬಂದಂತಹ ದಾರಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.ಬಸವಣ್ಣನವರು ತತ್ತ್ವ ಸಿದ್ಧಾಂತಗಳನ್ನು ಧಾರ್ಮಿಕ ಸಂಸ್ಕೃತಿಯನ್ನು ಜನರಿಗೆ ತಲುಪಿಸಿದರೀತಿಯಲ್ಲಿ ತಪಸ್ವಿ ಸಿದ್ದಲಿಂಗೇಶ್ವರರುಒಬ್ಬರು ಎಂದರು.
ಇದೇ ರೀತಿ ಶ್ರೀ ಸಿದ್ದಲಿಂಗೇಶ್ವರರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಭಕ್ತರಿಗೆ ಕರೆ ನೀಡಿದರು. ಮುಂದಿನ 2021 ನೇ ಜನವರಿ ತಿಂಗಳಲ್ಲಿ ಮಾಗಡಿ ಕೆಂಪೇಗೌಡರ ಪಟ್ಟಣದಲ್ಲಿ ಶ್ರೀ ಸಿದ್ದಲಿಂಗೇಶ್ವರರ ಜಯಂತಿಯನ್ನುಎಲ್ವಿ ಟ್ರಾವೆಲ್ಸ್ ನ ಪರಮಶಿವಯ್ಯನವರ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆಸಲಾಗುವುದು ಎಂದರು.
ಶ್ರೀ ಸಿದ್ದಲಿಂಗೇಶ್ವರರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಗ್ಗೆರೆಯಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ಜಯಂತ್ಯುತ್ಸವ ಸಮಿತಿಯ ಪ್ರತಿಯೊಬ್ಬ ಸಂಚಾಲಕರಿಗೆ ಅಭಿನಂದನೆ ಸಲ್ಲಿಸಿದರು. .
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…