ಜೇವರ್ಗಿ: ಬಸವಾದಿ ಶರಣರ ವಿಚಾರಧಾರೆಗಳನ್ನು ಜನರಿಗೆ ತಿಳಿಸಿಕೊಡುವ ಉದ್ದೇಶದಿಂದ ಬರುವ ಜ.೧೦ ರಿಂದ ಫೆ.೦೬ ರ ವರೆಗೆ ಪ್ರವಚನ ಸೇವಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಮುಂಡರಗಿಯ ತೋಂಟದಾರ್ಯ ಮಠ ಹಾಗೂ ಬೈಲೂರ ನಿಷ್ಕಲ ಮಂಟಪದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿಯ ವಚನ ದರ್ಶನ ಪ್ರವಚನ ಆಯೋಜಿಸಲಾಗಿದೆ ಎಂದು ಯಡ್ರಾಮಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪ್ರವಚನದ ಪೋಸ್ಟರ್, ಸ್ಟಿಕ್ಕರ್ ಸೇರಿದಂತೆ ವಿವಿಧ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿದಿನ ಸಂಜೆ ೬:೩೦ ರಿಂದ ೭:೩೦ ರ ವರೆಗೆ ನಾಡಿನ ಖ್ಯಾತ ವಾಗ್ಮಿ ನಿಜಗುಣಾನಂದ ಶ್ರೀಗಳಿಂದ ಪ್ರವಚನ ನಡೆಯಲಿದೆ. ಸಮ ಸಮಾಜದ ನಿರ್ಮಾಣ ಮತ್ತು ಸಹೋದರತ್ವ ಹೆಚ್ಚಿಸಲು ಬಸವಾದಿ ಶರಣರ ಚಿಂತನೆಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳುವುದು ಬಹು ಮುಖ್ಯವಾಗಿದೆ. ಹೀಗಾಗಿ ಶರಣರ ಶ್ರೇಷ್ಠ ವಿಚಾರಗಳನ್ನು ಜೇವರ್ಗಿ ಜನರಿಗೆ ಪ್ರವಚನದ ಮೂಲಕ ತಿಳಿಸಿಕೊಡಲಾಗುವುದು. ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ಶಿವಣಗೌಡ ಪಾಟೀಲ ಹಂಗರಗಿ, ಬಸವಕೇಂದ್ರ ಅಧ್ಯಕ್ಷ ಶರಣಬಸವ ಕಲ್ಲಾ, ಬಿ.ಎನ್.ಪಾಟೀಲ, ಸದಾನಂದ ಪಾಟೀಲ, ಮಲ್ಲಣಗೌಡ ಕನ್ಯಾಕೋಳೂರ, ಮಲ್ಕಣಗೌಡ ಹೆಗ್ಗಿನಾಳ, ಭಗವಂತ್ರಾಯ ಬೆಣ್ಣೂರ, ಅನೀಲ ರಾಂಪೂರ, ಮಹಾದೇವಪ್ಪ ದೇಸಾಯಿ, ಚಂದ್ರಶೇಖರ ತುಂಬಗಿ, ಭುಜಂಗಪ್ಪ ದೇಶಟ್ಟಿ, ನಿಂಗಣ್ಣಗೌಡ ಹಳಿಮನಿ, ಸುರೇಶ ಹಳ್ಳಿ, ಅಖಂಡು ಕಲ್ಲಾ, ಈರಣ್ಣ ಭೂತಪೂರ, ಡಿ.ಬಿ.ರಾಠೋಡ, ರಾಮಣ್ಣ ತೊನ್ಸಳ್ಳಿಕರ್, ಮಲ್ಲಿಕಾರ್ಜುನ ಮಾವನೂರ ಸೇರಿದಂತೆ ಪ್ರವಚನ ಸೇವಾ ಸಮಿತಿ ಸದಸ್ಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…