ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಲಬುರಗಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

0
195

ಕಲಬುರಗಿ: ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಎ.ಐ.ಎಸ್.ಡಿ.ಓ ಹಾಗೂ ವಿದ್ಯಾರ್ಥಿ ಸಂಘಟನೆಯಾದ ಕ್ಯಾಂಪಸ್ ಫ್ರಂಟ್ ಸಂಘಟನೆಗಳು ತಮ್ಮ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ, ಎ.ಬಿ.ವಿಪಿ ಹಾಗೂ ಕೇಂದ್ರ ಸರಕಾರದ ಆಕ್ರೋಶ ವ್ಯಕ್ತಪಡಿಸಿದರು.

ಎ.ಐ.ಎಸ್.ಡಿ.ಓ ಹೋರಾಟಗಾರರು ದಿಲ್ಲಿ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ದೇಶದ ಮೇಲಿನ ಹಲ್ಲೆಯಾಗಿದೆ ಕೇಂದ್ರ ಸರಕಾರ ಎಚ್ಚತೊಕೊಂಡು ಇದನ್ನು ತಡೆಯಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ಎಲ್ಲಾ ಅಡೆತಡೆಗಳನ್ನು ಮೀರಿ ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಶುಲ್ಕ ಹೆಚ್ಚಳ ವಿರೋಧಿ ಹೋರಾಟದ ವಿರುದ್ಧ ಆಡಳಿತ ವರ್ಗದ ಸಹಕಾರದೊಂದಿಗೆ ಕೋಮುವಾದಿ ಎಬಿವಿಪಿ ನಡೆಸಿದ ಈ ದಾಳಿಯು, ಆಡಳಿತವರ್ಗದ ಹೊಣೆಗೇಡಿತನವನ್ನು ತೋರಿಸುತ್ತದೆ. ಶುಲ್ಕ ಹೆಚ್ಚಳ ವಿರೋಧಿ ಹೋರಾಟದ ದಿಕ್ಕು ತಪ್ಪಿಸಲು ಮತ್ತು ವಿದ್ಯಾರ್ಥಿ ಸಮುದಾಯದಲ್ಲಿ ಭಯ ಮೂಡಿಸಲು JNU ಆಡಳಿತ ವರ್ಗ ಮತ್ತು ಎಬಿವಿಪಿ ಈ ಕುತಂತ್ರವನ್ನು ಹೆಣೆದಿವೆ ಎಂದು ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷರಾದ ಹಣಮಂತ ಎಸ್.ಎಚ್. ಹೇಳಿದರು.

ಹೋರಾಟ ನಿರತ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಬೆಂಬಲ ಸೂಚಿಸುತ್ತಾ, ದೇಶದ ವಿದ್ಯಾರ್ಥಿ ಸಮುದಾಯ ಮತ್ತು ಎಲ್ಲಾ ಜನಗಳಲ್ಲಿ ಈ ಸಂಕಷ್ಟದ ಸಮಯದಲ್ಲಿ JNU ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಬೆಂಬಲವಾಗಿ ನಿಲ್ಲಲು ಕರೆ ನೀಡುತ್ತದೆ. ಈ ರೀತಿಯ ದಾಳಿಗಳನ್ನು ಎದುರಿಸಲು ನಾವೆಲ್ಲರೂ ಒಂದಾಗಬೇಕು ಮತ್ತು ಇಂತಹ ಅಪ್ರಜಾತಾಂತ್ರಿಕ, ನಿರಂಕುಶವಾದಿ ಮತ್ತು ಕ್ರೂರ ಆಡಳಿತದ ವಿರುದ್ಧ ಬಲಿಷ್ಠ ಜನ ಹೋರಾಟವನ್ನು ಕಟ್ಟಬೇಕೆಂದು ನಾವು ಎಲ್ಲರಲ್ಲು ಮನವಿ ಮಾಡಿಕೊಳ್ಳುತ್ತೇವೆ.

ಆ ಕಾರಣಕ್ಕಾಗಿ, JNU ನಲ್ಲಿ ನಡೆದ ದಾಳಿ ವಿರೋಧಿಸಿ ಜನವರಿ 6ನ್ನು ಅಖಿಲ ಭಾರತ ಪ್ರತಿಭಟನಾ ದಿನವನ್ನಾಗಿ ಘೋಷಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮತ್ತು ಹೆಚ್ಚಳವಾಗಿರುವ ಶುಲ್ಕವನ್ನು ಈ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಎಸ್.ಎಫ್.ಐ. ಜಿಲ್ಲಾ ಕಾರ್ಯದರ್ಶಿಗಳು, ಸಿದ್ದಲಿಂಗ ಮಾಳಾ, ಕೆ.ವಿ.ಎಸ್., ಜಿಲ್ಲಾ ಸಂಚಾಲಕರು ರಾಜೆಂದ್ರ ರಾಜವಾಳ ರವರು ಸಹ ಮಾತನಾಡಿದರು ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಈರಣ್ಣ ಇಸಬಾ, ಎಐಡಿಎಸ್‌ಓ ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ, ಗೌತಮ, ವೆಂPಟೇಶ, ಶಿಲ್ಪಾ.ಬಿ.ಕೆ, ಅರುಣ, ಪ್ರೀತಿ ದೊಡ್ಡಮನಿ, ಗೊಧಾವರಿ,ನೂರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಅಲಿಂ ಇಲಾಹಿ, ದೇಶದ ವಿಶ್ವ ವಿದ್ಯಾಲಯದಲ್ಲಿ ನೂಗ್ಗಿ ವಿದ್ಯಾರ್ಥಿಗಳ ಮೇಲೆ ನಿರಂತರ ಮಾರಣಾಂತಿಕ ಹಲ್ಲೆ ನಡೆಸಲಾಗುತ್ತಿದ್ದು, ಇದಕ್ಕೆ ಕೇಂದ್ರದ ಮೋದಿ ಸರಕಾರ ಕುಮ್ಮಕು ನೀಡುತ್ತಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here