ಬಿಸಿ ಬಿಸಿ ಸುದ್ದಿ

ಅಂಗನವಾಡಿಗಳ ಬಲವರ್ಧನೆ ಕಾಯಕರ್ತೆಯರ ಕೈಲಿದೆ: ಪಂಡಿತ ನಿಂಬೂರ

ಸುರಪುರ: ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ಕೇಂದ್ರಗಳಲ್ಲಿ ಪ್ರಾಥಮಿಕ ಶಾಲಾ ಹಂತಕ್ಕೆ ಸಿದ್ದಗೊಳಿಸಿ ಗುಣಮಟ್ಟದ ಶಿಕ್ಷಣ ನೀಡಲು ಭದ್ರಬುನಾದಿ ಆಗಬೇಕಾಗಿದ್ದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾರ್ಮಥ್ಯ ಹೆಚ್ಚಿಸುವ ತರಬೇತಿ ಅಗತ್ಯವಾಗಿತ್ತು. ತರಬೇತಿ ಲಾಭ ಪಡೆಯುವ ಮೂಲಕ ಅಂಗನವಾಡಿ ಕೇಂದ್ರಗಳು ಬಲವರ್ಧನೆ ಮಾಡುವ ಹೊಣೆಗಾರಿಕೆ ಕಾರ್ಯಕರ್ತೆಯರ ಕೈಯಲ್ಲಿದೆ ಎಂದು ಸರಕಾರಿ ಪ್ರೌಢ ಶಾಲೆ ದೋರನಳ್ಳಿ ಶಾಲೆಯ ಮುಖ್ಯಗುರುಗಳಾದ ಪಂಡಿತ ನಿಂಬೂರ ಮಾತನಾಡಿದರು.

ರಂಗಂಪೇಟೆಯ ಕರ್ನಾಟಕ ಬಿ.ಈಡಿ ಕಾಲೇಜ ಸಭಾಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಲಬುರ್ಗಿ, ಜಿಲ್ಲಾ ಪಂಚಾಯತ ಯಾದಗಿರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಆಭಿವೃದ್ಧಿ ಯೋಜನಾಧೀಕಾರಿಗಳ ಕಛೇರಿ ಸುರಪುರ, ಹಾಗೂ ಟಾಟಾ ಟ್ರಷ್ಟ್ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಹಸನಾಪುರ ವಲಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಡಲ್-2 ತರಬೇತಿ ಕಾರ್ಯಗಾರದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನಾಧೀಕಾರಿ ಲಾಲಸಾಬ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತರಬೇತಿ ಪಡೆಯುವ ಮೂಲಕ ಸರಕಾರಕ್ಕೆ ಮಾದರಿ ಅಂಗನವಾಡಿ ಕೇಂದ್ರಗಳಾಗಿ ಪರಿವರ್ತಿಸಿ ತೋರಿಸುವ ಹೊಣೆಗಾರಿಕೆ ನಿಮ್ಮ ಕೈಯಲ್ಲಿದೆ. ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸುವುದು, ಸಾರ್ವಜನಿಕರಿಗೆ ತಲುಪಿಸುವ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ಕರ್ತವ್ಯದಲ್ಲಿ ಖುಷಿ ಕೊಡುತ್ತದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

ವೇದಿಕೆ ಮೇಲೆ ಅಥಿತಿಗಳಾಗಿ ಭಾಗವಹಿಸಿದ ಬಿ.ಆರ್.ಪಿ ಖಾದರ ಪಟೇಲ್, ಕಲಿಕಾ ಟ್ರಷ್ಟ್ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸವಿತಾ, ಸುರಪುರ ಮತ್ತು ಹಸನಾಪುರ ವಲಯದ ಮೇಲ್ವಿಚಾರಕಿ ಚಂದ್ರಲೀಲಾ ಬಿಲ್ಲವ್ ಉಪಸ್ಥಿತರಿದ್ದು ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಹೇಮನೂರ ವಲಯದ ಅಂಗನವಾಡಿ ಮೇಲ್ವಿಚಾರಕಿ ಮತ್ತು ತರಬೇತಿ ಮುಖ್ಯ ಸಂಪನ್ಮೂಲ ವ್ಯಕ್ತಿ ಯಾಗಿರುವ ಸತ್ಯಮ್ಮ ರವರು ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago