ಮೇ 9 ರಿಂದ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಪ್ರಾರಂಭ

0
516

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಪ್ರಕ್ರಿಯೇಯು ಈಗಾಗಲೇ ಮೇ ೨ರಿಂದ ಪ್ರಾರಂಭವಾಗಿದೆ.  ಎಸ್.ಎಸ್.ಎಲ್.ಸಿ. ವಾರ್ಷಿಕ/ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ. ಯಲ್ಲಿ ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಮೇ 18ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಎಸ್.ಬಿ. ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ www.dte.kar.nic.in ವೆಬ್‌ಸೈಟ್‌ದಿಂದ ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಮಾಹಿತಿ ಪುಸ್ತಕದಲ್ಲಿರುವ ಸೂಚನೆಗಳನ್ವಯ ಸಂಪೂರ್ಣ ಭರ್ತಿ ಮಾಡಬೇಕು. ಪರಿಶಿಷ್ಟ ಜಾತಿ,  ಪರಿಶಿಷ್ಟ ಪಂಗಡ, ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 50 ರೂ. ಮತ್ತು ಇತರೆ ಸಾಮಾನ್ಯ, 2ಎ, 2ಬಿ, 3ಎ, 3ಬಿ ವರ್ಗದ ವಿದ್ಯಾರ್ಥಿಗಳಿಗೆ 100ರೂ. ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಶುಲ್ಕದ ಹಣವನ್ನು ಈ ಕೆಳಕಂಡ ದಾಖಲೆ ಪರಿಶೀಲನಾ ಕೇಂದ್ರ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ನಗದು ರೂಪದಲ್ಲಿ ಪಾವತಿಸಬಹುದಾಗಿದೆ. ವಿದ್ಯಾರ್ಥಿಗಳ ಆಯ್ಕೆ ಆನ್‌ಲೈನ್ ಇಂಟರ‍್ಯಾಕ್ಟಿವ್ ಮೂಲಕ ಇದ್ದು, ವಿದ್ಯಾರ್ಥಿಗಳು ಅರ್ಜಿಯನ್ನು ಪಡೆದು ಭರ್ತಿ ಮಾಡಿ ನಿಗದಿತ ದಿನಾಂಕದೊಳಗಾಗಿ ಆಯಾ ಪಾಲಿಟೆಕ್ನಿಕ್ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ಅರ್ಜಿ ಸಲ್ಲಿಸುವ ಸಂಸ್ಥೆಗಳ ಹೆಸರು.

ಸರ್ಕಾರಿ ಪಾಲಿಟೆಕ್ನಿಕ್ ಕಲಬುರಗಿ: ದೂರವಾಣಿ ಸಂಖ್ಯೆ 08472-220871, ಮಹಿಳೆಯರ ಸರ್ಕಾರಿ ಪಾಲಿಟೆಕ್ನಕ್ ಕಲಬುರಗಿ: 08472-256418, , ಕೆಸಿಟಿ ಪಾಲಿಟೆಕ್ನಿಕ್ ಕಲಬುರಗಿ(ಅನುದಾನಿತ), ಎನ್.ವಿ. ಪಾಲಿಟೆಕ್ನಿಕ್ ಕಲಬುರಗಿ ಅನುದಾನಿತ ಸರ್ಕಾರಿ ಪಾಲಿಟೆಕ್ನಿಕ್ ಕಾಳಗಿ, ಸರ್ಕಾರಿ ಪಾಲಿಟೆಕ್ನಕ್ ಕಾಲೇಜು ಅಫಜಲಪುರ, ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಸುರಪುರ ಜಿಲ್ಲಾ ಯಾದಗಿರಿ.

ಪ್ರಸಕ್ತ ಸಾಲಿನಿಂದ ಅರ್ಜಿ ಮತ್ತು ಮಾಹಿತಿ ಪುಸ್ತಕವನ್ನು 122 ಸಹಾಯ ಕೇಂದ್ರಗಳಲ್ಲಿ ಮಾರಾಟ ಮಾಡಲಾಗುವುದಿಲ್ಲ ಎಂಬ ಅಂಶವನ್ನು ಅಭ್ಯರ್ಥಿಗಳು ಹಾಗೂ ಪೋಷಕರ ಗಮನಕ್ಕೆ ತರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸರ್ಕಾರಿ ಪಾಲಿಟೆಕ್ನಿಕ್ ಕಾರ್ಯಾಲಯವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472- 221871ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here