ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಎ.ಐ.ಯು.ಟಿ.ಯು.ಸಿ ನೇತೃತ್ವದಲ್ಲಿ ಪ್ರತಿಭಟನೆ

ಕಲಬುರಗಿ, ಶಹಾಬಾದ: ಇಂದು ನಡೆದ ಅಖಿಲ ಭಾರತ ಮುಷ್ಕರದ ಅಂಗವಾಗಿ ಎ.ಐ.ಯು.ಟಿ.ಯು.ಸಿ ಹಾಗೂ ಆರ್.ಕೆ.ಎಸ್. ಶಹಾಬಾದ ಸ್ಥಳೀಯ ಸಮಿತಿಯಿಂದ ನಗರದ ರಿಂಗ್ ರೋಡನಲ್ಲಿ ಪ್ರತಿಭಟನೆ ನಡೆಸಿ ಬೆಂಬಲ ವ್ಯಕ್ತಪಡಿಸಿದರು.

ದೇಶದ ಆರ್ಥಿಕತೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಕಾರ್ಖಾನೆಗಳು ಮುಚ್ಚಿಹೋಗುತ್ತಿವೆ. ಇದರಿಂದಾಗಿ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ವರ್ಗದ ಬದುಕಿನ ಮೇಲೆ ಅಪಾರ ಪರಿಣಾಮ ಬೀರಿ ಬಹು ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆರ್ಥಿಕ ಹಿಂಜರಿತದ ನೆಪದಲ್ಲಿ ಕೇಂದ್ರ ಸರಕಾರವು ದೊಡ್ಡ ಶ್ರೀಮಂತರಿಗೆ ೧.೪೫ ಲಕ್ಷ ಕೋಟಿ ತೆರಿಗೆ ವಿನಾಯಿತಿ ಕೊಡುಗೆ ನೀಡಿದೆ. ಆದರೆ ಅದೇ ವೇಳೆಗೆ ಕಾರ್ಮಿಕರಿಗೆ ಕೆಲಸದ ಭದ್ರತೆ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಒಂದೇ ಒಂದು ರೂಪಾಯಿಯನ್ನು ನೀಡದೆ ದ್ರೋಹ ಬಗೆದಿದೆ. ಎಂದು ಎಸ್.ಯು.ಸಿ.ಐ (ಸಿ) ನ ಶಹಾಬಾದ ಸ್ಥಳೀಯ ಕಾರ್ಯದರ್ಶಿಗಳಾದ ಗಣಪತರಾವ್ ಕೆ. ಮಾನೆ. ರವರು ಆರೋಪಿಸಿದರು.

ಭಾರತ ಉಳಿಸಿ ಸಮಿತಿಯ ಸಂಚಾಲಕರಾದ ಮರೆಪ್ಪ ಹಳ್ಳಿ,  ಎ.ಐ.ಯು.ಟಿ.ಯು.ಸಿ ಯ ಜಿಲ್ಲಾ ಉಪಾಧ್ಯಾಕ್ಷರಾದ ರಾಘವೇಂದ್ರ ಎಂ.ಜಿ. ಆರ್.ಕೆ.ಎಸ್. ಸ್ಥಳೀಯ ಕಾರ್ಯದರ್ಶಿಗಳಾದ ರಾಜೇಂದ್ರ ಅತನೂರ, ಯುವಜನ ಸಂಘಟನೆಯ ಜಿಲ್ಲಾ ಕಾರ್ಯದರ್ಶಗಳಾದ ಜಗನ್ನಾಥ ಎಸ್.ಎಚ್. ಎ.ಐ.ಎಂ.ಎಸ್.ಎಸ್. ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಗುಂಡಮ್ಮ ಮಡಿವಾಳ, ಎ.ಐ.ಡಿ.ಎಸ್.ಓ ನ ಸ್ಥಳೀಯ ಉಪಾಧ್ಯಾಕ್ಷರಾದ ರಮೇಶ ದೇವಕರ, ಶಿವಕುಮಾರ ಈ.ಕೆ, ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕುಗಿ ಆಕ್ರೋಶ ವ್ಯಕ್ತಪಡಿಸಿದರು.

ಈರುಳ್ಳಿ, ಪೆಟ್ರೋಲ್ ಸೇರಿದಂತೆ ವಸ್ತುಗಳ ಬೆಲೆಗಳ ಏರಿಕೆ, ಕನಿಷ್ಟ ವೇತನವು ನಿಗದಿ, ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದು, ಗುತ್ತಿಗೆ ಹಾಗೂ ಹೊರ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ, ಸಾರ್ವಜನಿಕ ಉದ್ಯಮಗಳ (ಪಿ.ಎಸ್.ಯು) ಖಾಸಗೀಕರಣವನ್ನು ತಡೆಗೆ. ಆಶಾ, ಅಂಗನವಾಡಿ ಹಾಗೂ ಅಕ್ಷರದಾಸೋಹ ಸೇರಿದಂತೆ ಇತರೆ ಸ್ಕೀಂ ನೌಕರರನ್ನು ಖಾಯಂ ಗೊಳಿಸಿ, ರೈತರ ಕಲ್ಯಾಣಕ್ಕಾಗಿ ಕಾನೂನು ಜಾರಿ, ಡಾ. ಎಸ್.ಎಂ. ಸ್ವಾಮಿನಾಥನ್ ವರದಿಯನ್ನು ಅನುಸರಿಸಿ ಭೂಮಿ ಬಾಡಿಗೆ, ಕುಟುಂಬದ ಶ್ರಮ ನಿರ್ಧರಿಸಿ ರೈತರ ಬೆಳೆಗಳಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ತೊಗರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ, ರೈತರು ಬೆಳೆದಷ್ಟು ಖರೀದಿಸಬೇಕು. ರೈತರ ಬೆಳೆಗಳಿಗೆ ಸಬ್ಸಿಡಿ ಮುಂದುವರಿಕೆಗಾಗಿ, ಉದ್ಯೋಗ ಖಾತ್ರಿಯ ಕೂಲಿಯನ್ನು ಹೆಚ್ಚಿಸಬೇಕು. ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದವರಿಗೆ ಪಿಂಚಣಿ ಒದಗಿಸಿ,  ಸರಕಾರಿ ನೌಕರರ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೇಯ ಪಿಂಚಣಿ ಯೋಜನೆಯನ್ನು ಮುಂದುವರೆಕೆಗಾಗಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಜನವಿರೋಧಿ ಸಿ.ಎ.ಎ. ಹಾಗೂ ಎನ್.ಆರ್.ಸಿ ಹಿಂಪಡೆಯಬೇಕು. ಹೀಗೆ ಹಲವು ಆರ್ಥಿಕ ಬೇಡಿಕೆಗಳನ್ನು ತೆಗೆದುಕೊಂಡು ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಭಾರತ ಉಳಿಸಿ ಸಮಿತಿಯ ಮುಖಂಡರಾದ ಜಹೀರ್ ಅಹಮದ್ ಪಟವೇಗಾರ, ಮಹಮ್ಮದ ಮಸ್ತಾನ, ಶಾನವಾಜ್, ಯಾಸೀನ್, ಮಹಾದೇವ ಸ್ವಾಮಿ, ರಘು ಮಾನೆ, ಪ್ರವೀಣ ಬಣಮೀಕರ, ತಿಮ್ಮಯ್ಯ ಮಾನೆ, ನೀಲಕಂಠ ಹುಲಿ, ಮಾಹಾದೇವಿ ಮಾನೆ, ಸವಿತಾ, ಹಾಗೂ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago