ಕಾರ್ಮಿಕರ ಮುಷ್ಕರಕ್ಕೆ ಕಲಬುರಗಿಯಲ್ಲಿ ಉತ್ತಮ ಪ್ರತಿಕ್ರಿಯೆ

0
76

ಕಲಬುರಗಿ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಮತ್ತು ನೂತನ ಪೌತ್ವ ಕಾಯ್ದೆ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಮತ್ತು ಇತರೆ ಸ್ಥಳೀಯ ಜನಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ದೇಶವ್ಯಾಪಿ ಮುಷ್ಕರಕ್ಕೆ ಕರೆಗೆ ಬೆಂಬಲ ನೀಡಿ ಕಲಬುರಗಿ ಮತ್ತು ಯಾದಿಗಿರಿ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಯಾವುದೇ ಅಹಿತಕರ ಘಟನೆ ಕಂಡುಬಂದಿಲ್ಲ.

ಇಂದು ನಗರದಲ್ಲಿ ಮುಷ್ಕರದ ಹಿನ್ನೆಲೆಯಲ್ಲಿ ಸಂಘಟನೆಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದು ಈ ಸಂದರ್ಭದಲ್ಲಿ  ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ದ್ರೋನ್ ಕ್ಯಾಮೆರ್ ಬಳಸಿ, ಬಿಗಿ ಬಂದೋಬಸ್ ಗಾಗಿ 100 ಪೊಲೀಸ್ ಅಧಿಕಾರಿ, 500 ಮುಖ್ಯಪೇದೆ, 200 ಹೋಂಗಾರ್ಡ್, 6 ಕೆ.ಎಸ್.ಆರ್.ಪಿ ತುಕಡಿ, 6 ಸಂಚಾರಿ ಪೊಲೀಸ್ ತಂಡ, ಸಿಸಿಟಿವಿ, ಬೈನಾಕ್ಯೂಲರ್ ಬಳಸಲಾಗಿತ್ತು.

Contact Your\'s Advertisement; 9902492681

ಮುಷ್ಕರದಲ್ಲಿ ಸಿಐಟಿಯು, ಎಐಟಿಯುಸಿ, ಸಿಪಿಐ(ಎಂ),  ಸೇರಿದಂತೆ ಕಾರ್ಮಿಕ ಸಂಘಟನೆಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದ್ದು, ರೈತ ಹಾಗೂ ಕಾರ್ಮಿಕ ಮುಖಂಡ ಮಾರುತಿ ಮಾನ್ನಡೆ ನೇತೃತ್ವದಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ  ಕುಳಿತು ಪ್ರತಿಭಟನೆ ನಡೆಸಿ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ಕಾರ್ಮಿಕ ಮುಖಂಡ ಮಾರುತಿ ಮಾಡೆ ಸೇರಿದಂತೆ ಮತ್ತಿತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ನಂತರ ಬಿಡುಗಡೆ ಮಾಡಲಾಯಿತು.

ಮುಷ್ಕರದ ಹಿನ್ನೆಲೆಯಲ್ಲಿ ಕೆಲಕಾಲ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬೃಹತ್ ಮೆರವಣಿಗೆ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಸಂಘಟನೆಗಳ ನೇತೃತ್ವದಲ್ಲಿ ಸಹಸ್ರಾರು ಜನ ಕಾರ್ಮಿಕರು ನಗರದ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಮಾಜಿ ಅಧ್ಯಕ್ಷ ಅಜಗರ್ ಚುಲಬುಲ್, ಅಳಂದ ಮಾಜಿ ಶಾಸಕ ಬಿ.ಆರ್ ಪಾಟೀಲ್, ನ್ಯಾಯವಾದಿ ವಾಹಾಜ್ ಬಾಬಾ, ಇಲಿಯಾಸ್ ಸೇಠ್ ಬಾಗಬಾನ್, ಮೋದ್ದಿನ್ ಪಟೇಲ್, ರೈತ ಮುಖಂಡ ಶರಣಬಸಪ್ಪ ಮಮಶೇಟಿ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮೌಲಾ ಮುಲ್ಲಾ, ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here