ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಶಿಕಲಾ ವಿ.ಟೆಂಗಳಿ ಅಧಿಕಾರ ಸ್ವೀಕಾರ

0
174

ಕಲಬುರಗಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಶಿಕಲಾ ವಿ.ಟೆಂಗಳಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಮೂಲತ: ಕಲಬುರಗಿ ಜಿಲ್ಲೆಯವರಾದ ಶಶಿಕಲಾ ವಿ. ಟೆಂಗಳಿ ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ಜನವರಿ 7 ಮಂಗಳವಾರವಷ್ಟೇ ಸರ್ಕಾರವು ಆದೇಶ ಹೊರಡಿಸಿತು. ಅದರಂತೆ ಬುಧವಾರ ನಿಗಮದ ಬೆಂಗಳೂರು ಕಚೇರಿಯಲ್ಲಿ ಪದಗ್ರಹಣ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಹಾಜರಿದ್ದ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿ-ಸಿಬ್ಬಂದಿಗಳು ನಿಗಮದ ನೂತನ ಅಧ್ಯಕ್ಷರಿಗೆ ಹೂಗುಚ್ಚ ನೀಡಿ ಶುಭ ಕೋರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here