ಶಹಾಪುರ: ನಾಳೆ ಶಹಾಪುರದ ಶ್ರೀ ಚರಬಸವೇಶ್ವರ ಗದ್ದುಗೆ ಮಂಟಪದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರು ಪ್ರಕಟಣೆಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಪಶು ಸಂಗೋಪನಾ ಸಚಿವರಾದ ಶ್ರೀ ಪ್ರಭು ಚವ್ಹಾಣ ಉದ್ಘಾಟಿಸಲಿದ್ದು ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಯಚೂರು ಸಂಸದರಾದ ಶ್ರೀ ರಾಜಾ ಅಮರೇಶ್ವರ ನಾಯಕ ,ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀ ರಾಜಶೇಖರ್ ಗೌಡ ಪಾಟೀಲ ವಜ್ಜಲ್ ಕಲಬುರಗಿಯ ಸಂಸದರಾದ ಡಾ. ಉಮೇಶ ಜಾಧವ್,ಯಾದಗಿರಿ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್,ಸುರಪುರ ಶಾಸಕರಾದ ನರಸಿಂಹನಾಯಕ ರಾಜುಗೌಡ ಗುರುಮಿಟ್ಕಲ್ ಶಾಸಕರಾದ ನಾಗನಗೌಡ ಕಂದಕೂರು, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರು, ಬಿ.ಜಿ.ಪಾಟೀಲ್ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ,ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ನಾಗಣ್ಣ ಪೂಜಾರಿ,ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಲಕ್ಷ್ಮೀದೇವಿ ನಾಗರಾಜ್ ಮಡ್ಡಿ,ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಅಮರಯ್ಯಸ್ವಾಮಿ ಜಾಲಿಬೆಂಚಿ,ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಶರಣು. ಬಿ. ಗದ್ದುಗೆ, ಹಾಗೂ ನೀಲಕಂಠ ಬಡಿಗೇರ, ಜಿಲ್ಲಾಧಿಕಾರಿಗಳಾದ ಶ್ರೀ ಎಂ ಕುರ್ಮಾರಾವ್,ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀಮತಿ ಶಿಲ್ಪಾ ಶರ್ಮಾ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಋಷಿಕೇಶ್ ಭಗವಾನ್ ಸೋನಾವಣೆ,ಶಹಾಪುರ ತಾಲೂಕು ದಂಡಾಧಿಕಾರಿಗಳಾದ ಜಗನ್ನಾಥ ರೆಡ್ಡಿ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಗನ್ನಾಥ ಮೂರ್ತಿ,ಶಹಾಪುರ ನಗರಸಭೆಯ ಪೌರಾಯುಕ್ತರಾದ ಶ್ರೀ ಬಸವರಾಜ ಶಿವಪೂಜೆ ಭಾಗವಹಿಸಲಿದ್ಧಾರೆ.
ಈ ಕಾರ್ಯಕ್ರಮದಲ್ಲಿ ಮಹಿಳೆಯರ ಮೀಸಲಾತಿ ಕುರಿತು ಡಾ ಜ್ಯೋತಿಲತಾ ತಡಿಬಿಡಿಮಠ ಉಪನ್ಯಾಸ ನೀಡಲಿದ್ದಾರೆ,ಮಹಿಳಾ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಶಾಪುರಿ ಕವಯಿತ್ರಿ ಶ್ರೀಮತಿ ಭಾಗ್ಯ ದೊರೆ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕವಯತ್ರಿಯರು ಭಾಗವಹಿಸಿ ಕವನ ವಾಚಿಸಲಿದಾರೆ.
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಜಾನಪದ ಕಲಾ ತಂಡಗಳ ಮೆರವಣಿಗೆ ಜರುಗಲಿದ್ದು ಮಂಡ್ಯ ಜಿಲ್ಲೆಯ ಶ್ರೀಮತಿ ಸವಿತಾ ಚಿರಕುನಯ ಪೂಜಾಕುಣಿತ,ಕೆ.ಎಂ. ದೊಡ್ಡಿಯ ಶ್ರೀಮತಿ ಸಹನಾ ಮತ್ತು ತಂಡದವರಿ೦ದ ನಂದಿ ಧ್ವಜ ಮಹಿಳಾ ಬಂಜಾರ ಜನಪದ ನೃತ್ಯ ಶ್ರೀಮತಿ ರಾಜಮ್ಮ ಮತ್ತು ತಂಡ ಕೆ.ಎಂ. ದೊಡ್ಡಿ ಅವರಿಂದ ಡೊಳ್ಳು ಕುಣಿತ ಶ್ರೀಮತಿ ರೇಗಾ ಮತ್ತು ತಂಡ ಬೀದರ್ ಜಿಲ್ಲೆಯಿಂದ ಮಹಿಳಾ ತಮಟೆ ವಾದನ ಜರುಗಲಿದ್ದು ನಂತರ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…