ಕಲಬುರಗಿ: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಮಿತಿಯಿಂದ ಆಶಾ ಕಾರ್ಯಕರ್ತೆಯರ ಹದಿನೈದು ತಿಂಗಳ ಬಾಕಿ ವೇತನ ಬಿಡುಗಡೆ ಆಗ್ರಹಸಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ವಲ್ಲಭಬಾಯಿ ಪಟೇಲ್ ಚೌಕನಿಂದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಸಂಘದ ಜಿಲ್ಲಾ ಅಧ್ಯಕ್ಷರಾದ ವಿ.ಜಿ.ದೇಸಾಯಿ ಮಾತನಾಡಿ, ಆಶಾ ಕಾರ್ಯಕರ್ತರ ಬಾಕಿ ಇರುವ ಸಂಬಳ ಬಿಡುಗಡೆಗಾಗಿ 6 ತಿಂಗಳಿಂದ ವೇತನಕ್ಕಾಗಿ ಮನವಿ ಸಲ್ಲಿಸಲಾಗುತ್ತಿದ್ದು, ಈ ಬಗ್ಗೆ ಚಳುವಳಿಗಳು ನಡೆಯುತಿವೇ ಆದರೆ ಸರಕಾರ 15 ತಿಂಗಳ ಬಾಕಿ ವೇತನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೇತನ ಪ್ರೋತ್ಸಹಧನ ನೀಡುವವರೆಗೂ ಜಿಲ್ಲೆಯಲ್ಲಿ ಎಲ್ಲಾ ಆಶಾಗಳು ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸುವದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ನಂತರ ಎ.ಐ.ಯು.ಟಿ.ಯು.ಸಿ ನ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಎಂ.ಶರ್ಮಾ ರವರು ಮಾತನಾಡುತ್ತಾ, ಸರಕಾರವು ಆಶಾ ಕಾರ್ಯಕರ್ತೇಯರನ್ನು ನಿರ್ಲಕ್ಷಿಸುತ್ತಿದೆ. ಅವರ ನೋವಿಗೆ ಸ್ಪಂದಿಸುತ್ತಿಲ್ಲ. ಕೂಡಲೇ ಅವರ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳು ಮನವಿ ಪತ್ರವನ್ನು ಸ್ವೀಕರಿಸಿ, ಜಿಲ್ಲೆಗೆ ಸಂಬಂದ ಪಟ್ಟ ವಿಷಯಗಳನ್ನು ಹತ್ತು ದಿನಗಳಲ್ಲಿ ಬಗೆಹರಿಸುವದಾಗಿ ತಿಳಿಸಿದರು ಅಲ್ಲದೆ ಎಂ.ಸಿ.ಟಿ.ಎಸ್. ಅನುದಾನದ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ರಾಘವೇಂದ್ರ ಎಂ.ಜಿ. ಸಂತೋಷ ಹಿರವೆ, ಮಲ್ಲಿನಾಥ ಸಿಂಘೆ, ಶಿವಲಿಂಗಮ್ಮ, ಜ್ಯೋತಿ, ಸಾವಿತ್ರಿ, ಲಕ್ಷ್ಮೀ, ಮಹಾದೇವಿ, ಸೇರಿದಂತೆ ಸಾವಿರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…