ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ: ನೋಂದಣಿ ಮತ್ತು ಖರೀದಿ ಅವಧಿ ವಿಸ್ತರಣೆ

0
80

ಕಲಬುರಗಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಸೇರಿ ಪ್ರತಿ ಕ್ವಿಂಟಲ್‌ಗೆ 6100 ರೂ.ಗಳ ದರದಂತೆ ತೊಗರಿ ಖರೀದಿಗಾಗಿ ಕಲಬುರಗಿ ಜಿಲ್ಲೆಯ ರೈತರಿಂದ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಜನವರಿ 10ರಿಂದ 31 ರವರೆಗೆ ಹಾಗೂ ಖರೀದಿ ಕಾಲಾವಧಿಯನ್ನು ಜನವರಿ 19 ರಿಂದ ಫೆಬ್ರವರಿ 20ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯ ಅಧ್ಯಕ್ಷ ಶರತ್ ಬಿ. ಅವರು ತಿಳಿಸಿದ್ದಾರೆ.

ಈ ಹಿಂದೆ ರೈತರಿಂದ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ೨೦೧೯ರ ಡಿಸೆಂಬರ್ ೨೧ ರಿಂದ ೨೦೨೦ರ ಜನವರಿ ೧೦ರವರೆಗೆ ಹಾಗೂ ಖರೀದಿ ಕಾಲಾವಧಿಯನ್ನು ೨೦೧೯ರ ಡಿಸೆಂಬರ್ ೨೧ ರಿಂದ ೨೦೨೦ರ ಜನವರಿ ೨೦ ರವರೆಗೆ ನಿಗದಿಪಡಿಸಲಾಗಿತ್ತು. ತೊಗರಿ ಬೆಳೆ ಬೆಳೆದ ರೈತರು ತಮ್ಮ ಹತ್ತಿರದ ಯಾವುದೇ ತೊಗರಿ ಖರೀದಿ ಕೇಂದ್ರಕ್ಕೆ ಅವಶ್ಯಕ ದಾಖಲಾತಿಗಳೊಂದಿಗೆ ಸರತಿ ಸಾಲಿನಲ್ಲಿ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರತಿ ಎಕರೆಗೆ ೫ ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ ೧೦ ಕ್ವಿಂಟಲ್ ತೊಗರಿ ಉತ್ಪನ್ನ ಮಾತ್ರ ಖರೀದಿಸಲಾಗುತ್ತದೆ.

Contact Your\'s Advertisement; 9902492681

ತೊಗರಿ ಖರೀದಿ ಕೇಂದ್ರಗಳಲ್ಲಿ ತೊಗರಿ ಉತ್ಪನ್ನವನ್ನು ಖರೀದಿಸುವ ಪೂರ್ವದಲ್ಲಿ ರೈತರು ನೀಡುವ ವಿವರವನ್ನು ಪ್ರ್ಯೂಟ್ಸ್ ತಂತ್ರಾಂಶದೊಂದಿಗೆ ಭೂಮಿ UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶಗಳೊಂದಿಗೆ ತಾಳೆ ಮಾಡಿ ಪರಿಶೀಲಿಸಿ ನಂತರ ನೋಂದಾಯಿಸಿಕೊಳ್ಳಬೇಕು. ಈ ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಲು ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ್ ರೀತಿಯಲ್ಲಿ ಒದಗಿಸಲಾಗುತ್ತದೆ.

ಒಂದು ವೇಳೆ ಬೆಳೆ ದರ್ಶಕದಲ್ಲಿ ಬೆಳೆ ಬೆಳೆಯದೆ ಇರುವುದು ಕಂಡು ಬಂದಲ್ಲಿ ಅಂತಹ ರೈತರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಧೃಢೀಕೃತ ಪಹಣಿ ಪತ್ರ ನೀಡಬೇಕು. ಅದರಂತೆ ಅಂತಹ ರೈತರನ್ನು ನೋಂದಾಯಿಸಿಕೊಳ್ಳಬೇಕು. ಪಹಣಿಯಲ್ಲಿರುವ ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು Aadhar Enabled Payment System ಮೂಲಕ ಜಮಾ ಆಗುವಂತೆ ಪಾವತಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here