ಬಿಸಿ ಬಿಸಿ ಸುದ್ದಿ

ಸಾಹಿತ್ಯ ಸಮ್ಮೇಳನ ಹಿನ್ನೆಲೆ: ಗುಣಮಟ್ಟದ ಕಿಟ್ ವಿತರಿಸಿ: ತಿಪ್ಪಣಪ್ಪ ಕಮಕನೂರ

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ನೊಂದಾಯಿತ ಪ್ರತಿನಿಧಿಗಳಿಗೆ ನೆನಪಿನಂಗಳದಲ್ಲಿ ಉಳಿಯುವಂತೆ ಉತ್ತಮ ಗುಣಮಟ್ಟದ ಕಿಟ್ ಬ್ಯಾಗ್ ವಿತರಣೆ ಮಾಡಬೇಕು ಎಂದು ವಿಧಾನ ಪರಿ?ತ್ ಸದಸ್ಯ ಹಾಗೂ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣಪ್ಪ ಕಮಕನೂರ್ ತಿಳಿಸಿದರು.

ಗುರುವಾರ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ನಡೆದ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಧ್ಯಮ ಪ್ರತಿನಿಧಿಗಳು ಸೇರಿ ನೊಂದಾಯಿತ ಪ್ರತಿನಿಧಿಗಳಿಗೆ ಸಾಹಿತ್ಯ ಸಮ್ಮೇಳನದ ಲಾಂಛನದೊಂದಿಗೆ ಪೆನ್ನು, ಪ್ಯಾಡ್ ಒಳಗೊಂಡಂತೆ ಸುಮಾರು ೨೦ ಸಾವಿರ ಕಿಟ್‌ಗಳು (ಬ್ಯಾಗ್) ನೀಡಲಾಗುತ್ತಿದೆ ಎಂದರು.

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳ ನೋಂದಣಿಗಾಗಿ ೬ ಕೌಂಟರ್‌ಗಳು ತೆರೆಯಲಾಗುವುದು. ಜಿಲ್ಲೆಯ ವಿವಿಧ ಪ್ರದೇಶದಿಂದ ಅಕ್ಷರ ಜಾತ್ರೆಗೆ ಆಗಮಿಸುವ ಸಾಹಿತ್ಯಾಸಕ್ತರು ಮತ್ತು ಪ್ರತಿನಿಧಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತಿ ನೋಂದಣಿ ಕೌಂಟರ್‌ಗೆ ೨೫ ಜನ ಸಿಬ್ಬಂದಿ ಕಾರ್ಯನಿರ್ವಹಿಸಲು ನಿಯೋಜಿಸುವುದು. ಕೌಂಟರ್‌ಗಳಲ್ಲಿ ಯಾವುದೇ ಗಲಾಟೆಗೆ ಅವಕಾಶ ನೀಡದಿರಲು ಪೋಲಿಸ್ ಸಿಬ್ಬಂದಿಯನ್ನು ನೇಮಿಸುವುದು. ಹೊರ ಜಿಲ್ಲೆಯಿಂದ ಬರುವ ಪ್ರತಿನಿಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಪ್ಪಣಪ್ಪ ಕಮಕನೂರ್ ಅಧಿಕಾರಿಗಳಿಗೆ ಸೂಚಿಸಿದರು.

ನೊಂದಣಿ ಸಮಿತಿಯ ಕಾರ್ಯಧ್ಯಕ್ಷ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ ಸಂಗಾ ಅವರು ಸಭೆಯಲ್ಲಿ ಇದುವರೆಗೆ ನೋಂದಣಿ ಸಮಿತಿಯಿಂದ ಕೈಗೊಂಡ ಪೂರ್ವಸಿದ್ಧತೆ ಕಾರ್ಯಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಸದಸ್ಯ ರಾಜೇಶ ಗುತ್ತೆದಾರ, ಜಿಲ್ಲಾ ಪೋಲಿಸ್ ವರಿ?ಧಿಕಾರಿ ಯಡಾ ಮಾರ್ಟಿನ್ ಮಾರ್ಬ್‌ನ್ಯಾಂಗ್, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಮುನಾವರ್ ದೌಲಾ, ಜಿಲ್ಲಾ ಕೈಗಾರಿಕಾ ಕೇಂದ್ರದ ನಿರ್ದೇಶಕ ಮಾಣಿಕ ರಘೋಜಿ ಸೇರಿದಂತೆ ಸಮಿತಿಯ ಇನ್ನಿತರ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago