ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಕಲಬುರಗಿಯ ರಾಷ್ಟ್ರೀಯ ಸೇವಾ ಯೋಜನೆ ’ಎ’ ಮತ್ತು ’ಬಿ’ ಘಟಕಗಳ ಅಡಿಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಸಹಕಾರದೊಂದಿಗೆ ಮಹಾವಿದ್ಯಾಲಯದಲ್ಲಿ ಕಳೆದ ೫ ದಿನಗಳಿಂದ ಮತದಾರರ ಮಿಂಚಿನ ನೊಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪದವಿ ಮಹಾವಿದ್ಯಾಲಯದ ೩೦೦ಕ್ಕಿಂತಲೂ ಹೆಚ್ಚು ವಿದ್ಯಾರ್ಥಿನಿಯರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯಿಂದ ನಿಯೋಜನೆಗೊಂಡ ಅಂಗನವಾಡಿ ಕಾರ್ಯಕರ್ತೆಯಾದ ರಾಜೇಶ್ವರಿ ಮತ್ತು ಶ್ರೀಮತಿ. ಹೀನಾ ಕೌಸರ್ ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಪ್ರೀತಿಯಿಂದ ಸ್ಪಂದಿಸಿ ಸಹಕರಿಸಿದರು.
ಮಹಾವಿದ್ಯಾಲಯದಲ್ಲಿ ನಡೆದ ೫ ದಿನಗಳ ಮಿಂಚಿನ ನೊಂದಣಿ ಕಾರ್ಯಕ್ರಮದಲ್ಲಿ ಮಹಾವಿದ್ಯಾಲದ ರಾಷ್ಟ್ರೀಯ ಸೇವಾ ಯೋಜನೆ ’ಎ’ ಮತ್ತು ’ಬಿ’ ಘಟಕಗಳ ಕಾರ್ಯಕ್ರಮಾಧಿಕಾರಿಗಳಾದ ಡಾ. ಪರವೀನ್ ರಾಜೇಸಾಬ್ ಮತ್ತು ಡಾ. ಮೋಹನರಾಜ ಪತ್ತಾರ, ಘಟಕಗಳ ಸ್ವಯಂ ಸೇವಕಿಯರಾ ಕುಮಾರಿ. ಪೂಜಾ ತಳವಾರ, ಕುಮಾರಿ. ಪೂಜಾ. ಡಿ, ಕುಮಾರಿ. ಸಂಗೀತಾ, ಕುಮಾರಿ. ಶ್ವೇತಾ ಮತ್ತಿತರರು, ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಮಂಡಳಿ ಸದಸ್ಯರಾದ ಡಾ. ನೀಲಕಂಠ ವಾಲಿ, ಡಾ. ಮಹೇಶಕುಮಾರ ಗಂವ್ಹಾರ, ಎನ್.ಸಿ.ಸಿ ಅಧಿಕಾರಿಗಳಾದ ಡಾ. ಪಾರ್ವತಿ ಪಾಟೀಲ್, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಉಮಾ ಪಾಟೀಲ್, ಡಾ. ಕನ್ಯಾಕುಮಾರಿ, ಶ್ರೀಮತಿ. ರೀಠಾ ಕುಲಕರ್ಣಿ ಸಕ್ರೀಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಹಾವಿದ್ಯಾಲಯದಲ್ಲಿ ನಡೆಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.