ಕಲಬುರಗಿ: ಸೇಡಂ ತಾಲ್ಲೂಕಿನ ಕೋಡ್ಲಾ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಕಸಾಪ ವಲಯ ಘಟಕದ ಆಶ್ರಯದಲ್ಲಿ ಜ.೧೩ರಂದು ಮಧ್ಯಾಹ್ನ ೨ ಗಂಟೆಗೆ ಕುವೆಂಪು ದರ್ಶನ ; ವಿಶ್ವ ಮಾನವ ಸಾರಿದ ಸಂದೇಶ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಲಯ ಕಸಾಪ ಪದಾಧಿಕಾರಿಗಳು ತಿಳಿಸಿದ್ದಾರೆ.
ಸೇಡಂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಿದ್ದು ಬಾನರ್ ಉದ್ಘಾಟಿಸಲಿದ್ದು, ಕೋಡ್ಗಾ ಗ್ರಾಪಂ ಅಧ್ಯಕ್ಷ ಅನಿಲಕುಮಾರ ನಾಮದಾರ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಾಹಿತಿ-ಪತ್ರಕರ್ತ ಶಿವರಂಜನ್ ಸತ್ಯಂಪೇಟೆ ಅವರು ಕುವೆಂಪು ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಸಿಪಿಐ ಶಂಕರಗೌಡ ಪಾಟೀಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಅವರನ್ನು ಸತ್ಕರಿಸಲಾಗುವುದು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರೆಡ್ಡಿ, ಸಂಶೋಧಕ ಮುಡಬಿ ಗುಂಡೇರಾವ, ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕೋಡ್ಲಾ ವಲಯ ಕಸಾಪ ಮಾಜಿ ಅಧ್ಯಕ್ಷ ಶಿವಲಿಂಗಯ್ಯ ಗಚ್ಚಿನಮಠ, ರಾಮಚಂದ್ರ ಗುತ್ತೇದಾರ ಇತರರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇವೇಳೆಯಲ್ಲಿ ಕಲಬುರಗಿ ರಂಗಾಯಣದ ವತಿಯಿಂದ ಶ್ರೀಪಾದ ಬಟ್ ನಿರ್ದೇಶನದ ಪಾಪು ಗಾಂಧಿ ಬಾಪು ಗಾಂಧಿ ನಾಟಕ ಪ್ರದರ್ಶನವಾಗಲಿದೆ ಎಂದು ಕಸಾಪ ವಲಯ ಕಾರ್ಯದರ್ಶಿ ನಾಗಯ್ಯ ಮಠ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…