ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಭರ್ತಿಗೆ ಸ್ಥಳೀಯ ಮತ್ತು ಮಿಕ್ಕುಳಿದ ವೃಂದ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಿ ೨೦೨೦ರ ಜನವರಿ ೩ ರಂದು ಜಾಹೀರಾತು ಪ್ರಕಟಣೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ಥಳೀಯ ಅಭ್ಯರ್ಥಿಗಳು ಮಿಕ್ಕುಳಿದ ವೃಂದದ ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಸ್ಥಳೀಯ ಅಭ್ಯರ್ಥಿಗಳು ಮಿಕ್ಕುಳಿದ ವೃಂದಕ್ಕೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ೨೦೨೦ರ ಫೆಬ್ರವರಿ ೫ ಕೊನೆ ದಿನವಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸ್ಸಿಂ ಅವರು ತಿಳಿಸಿದ್ದಾರೆ.
ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ/ ಸರಕು ಸಾಗಾಣಿಕೆ ಭಾರೀ ವಾಹನ ಚಾಲನಾ ಪರವಾನಿಗೆ ಹೊಂದಿ ೨ ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಾಣಿಕೆ ಭಾರೀ ವಾಹನ ಚಾಲನಾ ಪರವಾನಿಗೆ ಹೊಂದಿ ೨ ವರ್ಷ ಪೂರ್ಣಗೊಂಡಿರಬೇಕು. ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು ಹಾಗೂ ಚಾಲ್ತಿಯಲ್ಲಿರುವ ಎಂ.ವ್ಹಿ. ನಿರ್ವಾಹಕ ಪರವಾನಿಗೆ ಮತ್ತು ಬ್ಯಾಡ್ಜ್ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲಾತಿಗಳು, ಅರ್ಜಿ ಶುಲ್ಕ, ಚಾಲವಾ ವೃತ್ತಿ ಪರೀಕ್ಷೆ ನಡೆಸುವ ವಿಧಾನ ಇತ್ಯಾದಿ ಮಾಹಿತಿಯನ್ನೊಳಗೊಂಡ ನೇಮಕಾತಿ ಅಧಿಸೂಚನೆಯನ್ನು ಸಂಸ್ಥೆಯ ಅಂತರ್ಜಾಲ www.nekrtcjobs.karnataka.gov.in ಅಥವಾ www.nekrtc.org/jobs ರಲ್ಲಿ ವೀಕ್ಷಿಸಬಹುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…