ಬಿಸಿ ಬಿಸಿ ಸುದ್ದಿ

ಮಹಿಳೆಯರು ಆರ್ಥಿಕವಾಗಿ ಸಬಲರಾಗುವುದು ಅತ್ಯಂತ ಅವಶ್ಯಕ: ಶಶಿಕಲಾ ಟೇಂಗಳಿ

ಕಲಬುರಗಿ: ಮಹಿಳೆಯರ ಸಂಕಷ್ಟಕ್ಕೆ ಉದ್ಯೋಗ ಮತ್ತು ಆರ್ಥಿಕ ಭದ್ರತೆ ಇಲ್ಲದಿರುವುದೇ ಕಾರಣವಾಗಿದ್ದು ಈ ದಿಶೆಯಲ್ಲಿ ಸಮಾಜದಲ್ಲಿನ ಮಹಿಳೆಯರು ಆರ್ಥಿಕವಾಗಿ ಸಬಲರಾಗುವುದು ಅತ್ಯಂತ ಅವಶ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ ನುಡಿದರು.

ಸಮೀಪದ ಶ್ರೀನಿವಾಸ ಸರಡಗಿಯ ಶ್ರೀಗುರು ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದಲ್ಲಿ ಲಿಂ. ಚಿಕ್ಕವೀರೇಶ್ವರ ಶಿವಾಚಾರ್ಯರರ ೭೩ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಆಯೋಜಿಸಿದ ಮಹಿಳಾ ಗೋಷ್ಠಿಯಲ್ಲಿ ಶ್ರೀಮಠದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಶಿಕ್ಷಣದ ಜೊತೆಗೆ ಉದ್ಯೋಗ ಕೌಶಲ್ಯತೆಯ ತರಬೇತಿಯನ್ನು ಪಡೆದು ಸ್ವಯಂ ಉದ್ಯೋಗ ಕೈಗೊಳ್ಳುವುದರ ಮೂಲಕ ಮಹಿಳೆಯರು ಆರ್ಥಿಕ ಗುಣಮಟ್ಟ ಹೆಚ್ಚಿಸಿಕೊಳ್ಳುವುದು ಅವಶ್ಯವಾಗಿದ್ದು, ನಿಗಮ ಸ್ಥಾಪನೆಯಾದ ನಂತರ ಪ್ರಥಮ ಬಾರಿಗೆ ಕಲ್ಯಾಣ ಕರ್ನಾಟಕದಿಂದ ನಾನು ನಿಗಮದ ಅಧ್ಯಕ್ಷೆಯಾಗಿದ್ದು, ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಮಹಿಳೆಯರ ಸಂಕಷ್ಟ ನಿವಾರಿಸುವ ಮತ್ತು ಅವರಿಗೆ ಸ್ಪಂದಿಸುವ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು. ವಿಶೇಷವಾಗಿ ಹಿಂದುಳಿದ ಈ ಪ್ರದೇಶದಲ್ಲಿ ಮಹಿಳೆಯರ ಅದರಲ್ಲೂ ಗ್ರಾಮಿಣ ಪ್ರದೇಶದ ಮಹಿಳೆಯರ ಬದುಕು ರೂಪಿಸುವುದು ಅಗತ್ಯವಾಗಿದ್ದು ನಿಗಮದಿಂದ ಸಿಗುವ ಸೌಲಭ್ಯಗಳನ್ನು, ಯೋಜನೆಗಳನ್ನು ಗ್ರಾಮಾಂತರ ಭಾಗದ ಕಟ್ಟ ಕಡೆ ಮಹಿಳೆಗೂ ದೊರಕಿಸುವ ನಿಟ್ಟಿನತ್ತ ಪ್ರಾಮಾಣಿಕವಾಗಿ ಶ್ರಮಿಸುವುದರ ಮೂಲಕ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.

ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ|| ರೇವಣಸಿದ್ದ ಶಿವಾಚಾರ್ಯರು ಮಾತನಾಡಿ ಆಧುನಿಕ ಇಂದಿನ ಯುಗದಲ್ಲಿ ಮಹಿಳೆ ಎಲ್ಲ ರಂಗಗಳಲ್ಲೂ ಸಾಧನೆ ಮಾಡುತ್ತಿದ್ದು ಅತ್ಯಂತ ಹರ್ಷದಾಯಕವಾಗಿದ್ದು ಮಹಿಳೆಯರ ಬಗ್ಗೆ ಅನುಕಂಪ ಮಾತನಾಡುವುದಕ್ಕಿಂತ ಅವಳಿಗೆ ಅವಕಾಶ ನೀಡುವುದು, ಅವಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಮಹಿಳಾ ಗೋಷ್ಠಿಯನ್ನು ಶ್ರೀಮತಿ ಶಕುಂತಲಾ ಬಸವರಾಜ ಭೀಮಳ್ಳಿಯವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವೇದಿಕೆ ಮೇಲೆ ಕರ್ನಾಟಕ ರಾಜ್ಯ ಗ್ರಾಹಕರ ವೇದಿಕೆಗಳ ರಾಜ್ಯದ್ಯಕ್ಷರಾದ ಶ್ರೀಮತಿ ಮಹೇಶ್ವರಿ ಎಸ್.ವಾಲಿ, ಶ್ರೀಮತಿ ಶೈಲಜಾ ಭೀಮಳ್ಳಿ ಉಪಸ್ಥಿತರಿದ್ದರು.

ಜೀವನದರ್ಶನ ಪ್ರವಚನವನ್ನು ಯಾದಗಿರಿಯ ಪಂಡಿತ ಮಲ್ಲಿಕಾರ್ಜುನಶಾಸ್ತ್ರಿಗಳು ನೀಡಿದರು. ಅವರಿಗೆ ಸಂಗೀತ ಕಲ್ಲಿನಾಥ ಗವಾಯಿಗಳು ಹಾಗೂ ತಬಲಾ ಸಾಥಿಯನ್ನು ಮಲ್ಲಿಕಾರ್ಜುನ ವರನಾಳ ರವರು ನೀಡಿದರು. ನಾಗಲಿಂಗಯ್ಯ ಮಠಪತಿ ನಿರೂಪಿಸಿದರು. ಸಮಾಂಭದಲ್ಲಿ ಮುಖಂಡರಾದ ಬಸವರಾಜ ಗೋನಾಯಕ, ಪ್ರಗತಿಪರ ರೈತರಾದ ದೇವಿಂದ್ರಪ್ಪ ಭೇರಜಿ, ಮುಖಂಡರಾದ ಸಂತೋಷ ಆಡೆ, ಸಂಗಯ್ಯ ಹಿರೇಮಠ, ಲಿಂಗನಗೌಡ ಪಾಟೀಲ, ಶರಣಪ್ಪ ಬಿರಾದಾರ, ನಾಗರಾಜ ಪತ್ತಾರ ಪಾಲ್ಗೊಂಡಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago