ಬಿಸಿ ಬಿಸಿ ಸುದ್ದಿ

ಸ್ವಾಮಿತ್ವ ಮತ್ತು ಸಮಾಜ ಕಾರ್ಯ ಉಪನ್ಯಾಸ ಮತ್ತು ಸತ್ಕಾರ ಸಮಾರಂಭ ನಾಳೆ

ಕಲಬುರಗಿ: ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರ 55 ನೇ ಹುಟ್ಟು ಹಬ್ಬದ ನಿಮಿತ್ತ ಕಲಬುರಗಿಯ ಗೆಳೆಯರ ಬಳಗವು ಸ್ವಾಮಿತ್ವ ಹಾಗೂ ಸಮಾಜ ಕಾರ್ಯ ಮತ್ತು ಸತ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ನಾಗಲಿಂಗಯ್ಯ ಮಠಪತಿ ತಿಳಿಸಿದ್ದಾರೆ.

ನಾಳೆ ದಿನಾಂಕ 5-5-2019 ರಂದು ಸಂಜೆ 4.45 ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಾನ್ನಿಧ್ಯ ವನ್ನು ರೇವಣಸಿದ್ಧ ಶಿವಾಚಾರ್ಯರು ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗೊಬ್ಬೂರಿನ ಸಂತ ಸೇವಾಲಾಲ ಆಶ್ರಮದ ಬಳಿರಾಮ ಮಹಾರಾಜರು ನೇತ್ರತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಅರುಣಕುಮಾರ ಪಾಟೀಲ ಉದ್ಘಾಟಿಸಲಿದ್ದಾರೆ.

ಸಾಹಿತಿ ಡಾ. ನಾಗೇಂದ್ರ ಮಸೂತಿ ಅವರು ಉಪನ್ಯಾಸ ನೀಡಲಿದ್ದಾರೆ. ಮಹಾನಗರ ಪಾಲಿಕೆ ಸದಸ್ಯ ಶಿವು ಸ್ವಾಮಿ, ಯುವ ಮುಖಂಡ ಅಣವೀರಯ್ಯ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇದೇ ವೇಳೆಯಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಅಸುಂಡಿ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರಭಾಕರ ಜೋಶಿ ಅವರನ್ನು ಗೆಳೆಯರ ಬಳಗದ ವತಿಯಿಂದ ಸತ್ಕರಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago