ಮಂಗಳೂರು: ಮೋದಿ ಸರ್ಕಾರದ ವಿವಾದಿತ ಕಾನೂನುಗಳಾದ ಸಿಎಎ, ಎನ್ ಆರ್ ಸಿ ವಿರುದ್ಧ ಮಂಗಳೂರಿನಲ್ಲಿ ನಾಳೆ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮಂಗಳೂರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಮಂಗಳೂರಿನ ಇತಿಹಾಸದಲ್ಲಿ ಇದೇ ಮೊದಲು ಇಂಥದೊಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ದ.ಕ, ಉಡುಪಿ, ಮಡಿಕೇರಿ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಜನ ಸಾಗರ ಹರಿದು ಬಾರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವನ್ನು ವಹಿಸಲಾಗಿದೆ. ಅಂದಹಾಗೆ ಈ ಬೃಹತ್ ಪ್ರತಿಭಟನೆಯನ್ನ ಮಂಗಳೂರಿನ ಹೃದಯ ಭಾಗವಾದ ನೆಹರು ಮೈದಾನದಲ್ಲಿ ಹಮ್ಮಿಕೊಳ್ಳಲು ಮೊದಲು ನಿರ್ಧಾರಿಸಲಾಗಿತ್ತಂತೆ. ಆದರೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರಕದೆ ಇದ್ದ ಕಾರಣ ಮಂಗಳೂರಿನ ಹೊರ ವರ್ತುಲದಲ್ಲಿರುವ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಕಾರಣದಿಂದ ನಾಳೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬೃಹತ್ ಪ್ರತಿಭಟನೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ ಅನ್ನೋದು ಸಂಘಟಕರ ಮಾತು. ಕಾರ್ಯಕ್ರಮದಲ್ಲಿ ನಾಡಿನ ಚಿಂತಕರು ಸಾಮಾಜಿಕ ಹೋರಾಟಗಾರರು ಭಾಗಿಯಾಗಲಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…