ಕಲಬುರಗಿ: ಮುಂದಿನ ತಿಂಗಳು ಫೆ. ೫,೬ ಹಾಗೂ ೭ರಂದು ನೃಪತುಂಗನ ನೆಲ ಕಲಬುರಗಿಯಲ್ಲಿ ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ ಮತ್ತೊಂದು ಸಮ್ಮೇಳನ ನಡೆಸಲಾಗುವುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.
ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾಡಳಿತದ ಮೇಲೆ ಮುನಿಸಿಕೊಂಡ ಇಲ್ಲಿನ ಕೆಲ ಸಾಹಿತಿಗಳು, ಕವಿ-ಕಲಾವಿದರು ಈ ದಿಸೆಯಲ್ಲಿ ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನಲಾಗಿದೆ. ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದಾಗ ಖುಷಿ ಪಟ್ಟಿದ್ದ ಇಲ್ಲಿನ ಜನತೆ ಸಮ್ಮೇಳನಾಧ್ಯಕ್ಷರ ಆಯ್ಕೆಯ ನಂತರ ನಿರಾಸೆರಾಗಿದ್ದಾರೆ ಎನ್ನಲಾಗಿದೆ.
ಅಂತೆಯೇ ಜಿಲ್ಲಾ ಉಸ್ತುವಾರಿ ಸಚಿವರ ಎದುರುಗಡೆ ಸಮ್ಮೇಳನ ನಡೆಸುವುದಕ್ಕೆ ತಮ್ಮ ಸಹಮತವಿಲ್ಲ ಎಂದು ಪ್ರತಿರೋಧ ವ್ಯಕ್ತಪಡಿಸಿದ್ದರು. ಪ್ರಕೃತಿ ವಿಕೋಪದಿಂದ ಈ ಭಾಗದದಲ್ಲಿ ತೀವ್ರ ಬರಗಾಲ ತಲೆದೋರಿದ್ದು, ಈ ಬಾರಿ ಸಮ್ಮೇಳನ ನಡೆಸುವುದು ಬೇಡ. ಅದೇ ಹಣವನ್ನು ಬರ ಪರಿಹಾರ ನಿಧಿಗೆ ಕೊಟ್ಟು ರೈತರಿಗೆ ನೆರವಾಗಿರಿ ಎಂಬ ವಾದ ಕೂಡ ಮಾಡಿದ್ದರು. ಇದೇವೇಳೆಯಲ್ಲಿ ಕಲಬುರಗಿಯಲ್ಲಿ ಸಮ್ಮೇಳನ ನಡೆಸುತ್ತಿರುವುದು ಸಂತೋಷದ ಸಂಗತಿ. ಆದರೆ ಈ ಬಾರಿಯ ಸಮ್ಮೇಳನ ಮುಂದೂಡಿ ಎಂಬ ಸಲಹೆ ಕೂಡ ಮುಂದಿಟ್ಟಿದ್ದರು.
ಇದೆಲ್ಲದಕ್ಕೂ ಮಿಗಿಲಾಗಿ ತಮಗೆ ಈ ಸಮ್ಮೇಳನದಲ್ಲಿ ತಮ್ಮ ಹೆಸರು ಹಾಕಿಲ್ಲ. ತಮ್ಮನ್ನು ಸಂಪರ್ಕಿಸಿಲ್ಲ. ತಮಗೆ ಬೇಕಾದವರಿಗೆ ಮಾತ್ರ ಮಣೆ ಹಾಕಿದ್ದಾರೆ. ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದಾರೆ ಎಂಬ ತೀವ್ರ ಆರೋಪಗಳು ಸಹ ಕೇಳಿ ಬಂದಿವೆ. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಒಳಗೊಳಗೆ ಅಸಮಾಧನಗೊಂಡಿದ್ದ ಕೆಲ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳು, ಲೇಖಕರು ಸೇರಿಕೊಂಡು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ ಸಮ್ಮೇಳನ ನಡೆಸುವ ತಯಾರಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂಬ ಪಿಸು ಮಾತುಗಳು ಕೇಳಿ ಬರುತ್ತಿವೆ. ಇದು ಎಷ್ಟರ ಮಟ್ಟಿಗೆ ನಿಜ ಎಂಬುದಕ್ಕೆ ಕಾಲವೇ ಉತ್ತರಿಸಲಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…