ಕಲಬುರಗಿ: ಮುಂಂದಿನ ಫೆಭ್ರವರಿ ತಿಂಗಳು ೫, ೬ ಮತ್ತು ೭ರಂದು ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೇಂದ್ರ ಕಸಾಪದ ಜೊತೆಗೆ ಜಿಲ್ಲಾ ಕಸಾಪ ಕೂಡ ಸಜ್ಜುಗೊಂಡಿದೆ.
೧೯೮೭ರ ನಂತರ ಕಲಬುರಗಿ ನೆಲದಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಚನೆಗೊಂಡಿರುವ ವಿವಿಧ ಸಮಿತಿಗಳ ಅಧ್ಯಕ್ಷ, ಸದಸ್ಯರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಕನ್ನಡ ಭವನದ ಕಟ್ಟಡವನ್ನು ಕೂಡ ಇನ್ನೇನು ಕೆಲ ದಿನಗಳಲ್ಲೇ ಸುಣ್ಣ, ಬಣ್ಣ ಬಳಿದು ಶೃಂಗಾರಗೊಳಿಸಲಾಗುವುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ “ಇ-ಮೀಡಿಯಾ ಲೈನ್” ಗೆ ತಿಳಿಸಿದ್ದಾರೆ.
ಪುಸ್ತಕ ಮಳಿಗೆ, ಪ್ರತಿನಿದಿ ಶುಲ್ಕ ನೋಂದಣಿ, ದ್ವಾರಗಳ ನಿರ್ಮಾಣ ಮುಂತಾದ ಕಾರ್ಯಗಳು ಬಹುತೇಕ ಮುಗಿದ್ದು, ನಾಳೆ ಇವುಗಳ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸಮ್ಮೇಳನದ ನೆನಹಿನಲ್ಲಿ ಕವಿಜನ ಮಾರ್ಗ ಸ್ಮರಣ ಸಂಚಿಕೆ ಕೂಡ ಇನ್ನೆರಡು ದಿನಗಳಲ್ಲಿ ಅಚ್ಚಿಗೆ ಹೋಗಲಿದೆ ಎಂದು ತಿಳಿಸಿದರು.
ಸಮ್ಮೇಳನದ ಅಂಗವಾಗಿ ಸುಮಾರು ೬೫ ದ್ವಾರಗಳನ್ನು ನಿರ್ಮಿಸಲಾಗುವುದು. ಮುಖ್ಯ ವೇದಿಕೆಗೆ ಶ್ರೀ ವಿಜಯ ಹೆಸರಿಡುವುದನ್ನು ಅಂತಿಮಗೊಳಿಸಲಾಗಿದೆ. ಸಾಹಿತ್ಯ ಲೋಕದ ದಿಗ್ಗಜರಾದ ಪ್ರೊ. ಎಂ.ಎಸ್. ಲಠ್ಠೆ, ಚೆನ್ನಣ್ಣ ವಾಲೀಕಾರ, ವಚನ ವಸಂತದ ಕೊನೆಯ ಕೋಗಿಲೆ ಜೇವರ್ಗಿಯ ಷಣ್ಮುಖ ಶಿವಯೋಗಿ, ತತ್ವಪದಕಾರರ, ಗೀಗಿ ಪದಕಾರರು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಮಹನೀಯರು, ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳ ದ್ವಾರಗಳನ್ನು ನಿರ್ಮಿಸಲಾಗುವುದು ಎಂದು ವಿವರಿಸಿದರು.
ಜನಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆ ಈಗಾಗಲೇ ಹಲವು ಬಾರಿ ಮೀಟಿಂಗ್ ಸೇರಿ ಸಮ್ಮೇಳನ ಅದ್ದೂರಿ ಮತ್ತು ಅಚ್ಚು ಕಟ್ಟಾಗಿ ನಡೆಯುವಂತೆ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ, ಸಮ್ಮೇಳನ ನಡೆಯುವ ಸ್ಥಳದ ಸ್ವಚ್ಛತೆ ಕೂಡ ನಡೆಸಲಾಗುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…