ಸಾಹಿತ್ಯ ಸಮ್ಮೇಳನಕ್ಕೆ ಒಂದು ತಿಂಗಳ ವೇತನ ದೇಣಿಗೆ ನೀಡಿದ ಕಲಬುರಗಿ ಜಿಲ್ಲಾಧಿಕಾರಿಗಳು

0
73

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿಯಲ್ಲಿ ೨೦೨೦ರ ಫೆಬ್ರವರಿ ೫, ೬ ಹಾಗೂ ೭ರಂದು ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಮ್ಮ ಒಂದು ತಿಂಗಳ ವೇತನ ೯೭೪೬೧/- ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ಬುಧವಾರ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಒಂದು ತಿಂಗಳ ವೇತನದ ಚೆಕ್ ಹಸ್ತಾಂತರಿಸಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಣ ವೀರಭದ್ರ ಸಿಂಪಿ ಅವರು ಸಹ ತಮ್ಮ ಒಂದು ದಿನದ ವೇತನವನ್ನು ನುಡಿ ಹಬ್ಬಕ್ಕೆ ದೇಣಿಗೆ ನೀಡುವುದಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಗೋಪಾಲಕೃಷ್ಣ ಬಿ., ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ, ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ವಿಜಯಕುಮಾರ ಪರುತೆ, ಗೌರವ ಕೋಶಾಧ್ಯಕ್ಷ ದೌಲತರಾವ್ ಪಾಟೀಲ ಸೇರಿದಂತೆ ಪರಿಷತ್ತಿನ ಕಾರ್ಯಕಾರಣಿ ಸದಸ್ಯರು ಇದ್ದರು.
ಎಳ್ಳು-ಬೆಲ್ಲ ಹಂಚಿದ ಜಿಲ್ಲಾಧಿಕಾರಿಗಳು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸಭೆಗೆ ಅಗಮಿಸಿದ ಸರ್ವ ಸದಸ್ಯರನ್ನು ಜಿಲ್ಲಾಧಿಕಾರಿ ಶರತ್ ಬಿ. ಅವರು ಎಳ್ಳು-ಬೆಲ್ಲ ಹಂಚಿ ಸಂಕ್ರಮಣದ ಶುಭಾಶಯ ಕೋರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here