ಬಿಸಿ ಬಿಸಿ ಸುದ್ದಿ

ವಿದೇಶಿ ಸಂಸ್ಕೃತಿಯ ಅನುಕರಣೆಯಿಂದ ಅಪಾಯ; ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ

ಕಲಬುರಗಿ: ಇತ್ತಿಚಿನ ದಿವಸಗಳಲ್ಲಿ ನಮ್ಮ ದೇಶದಲ್ಲಿ ವಿದೇಶ ಸಂಸ್ಕೃತಿ, ಪರಂಪರೆಯನ್ನು ಅನುಸರಿಸುತ್ತಿರುವುದರಿಂದ ನಮ್ಮ ಮೂಲ ಸಂಸ್ಕೃತಿ ಕಡಿಮೆಯಾಗುತ್ತಿದೆ. ನಮ್ಮ ಸಂಸ್ಕೃತಿ, ಪರಂಪರೆಯಲ್ಲಿ ಮೌಲ್ಯಗಳಿವೆ. ಆದ್ದರಿಂದ ವಿದೇಶಿ ಸಂಸ್ಕೃತಿ ಅನುಕರಣೆ ಮಾಡುವುದು ಬೇಡವೆಂದು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಹೇಳಿದರು.

ನಗರದ ’ಕೆಎಚ್‌ಬಿ ಗೆಳೆಯರ ಬಳಗ’ದ ಸಹಯೋಗದೊಂದಿಗೆ ಪರಿಷತ್ ವತಿಯಿಂದ ನಗರದ ಆಳಂದ ಚೆಕ್ ಪೋಸ್ಟ್ ಸಮೀಪದಲ್ಲಿರುವ ಕೆಎಚ್‌ಬಿ ಗ್ರೀನ್ ಪಾರ್ಕ್‌ನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ ಹಮ್ಮಿಕೊಳ್ಳಲಾಗಿದ್ದ ’ಮಕ್ಕಳಿಗೆ ಫಲ ಎರೆಯುವ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಬಾಲ್ಯದಿಂದಲೆ ಮಕ್ಕಳಿಗೆ ನಮ್ಮ ಮೂಲ ಸಂಸ್ಕೃತಿಯನ್ನು ಮುಟ್ಟಿಸಬೇಕು. ಇದರಿಂದ ನಮ್ಮ ದೇಶದ ಮೌಲ್ಯಗಳು ಮುಂದಿನ ಪೀಳಿಗೆಗೆ ತಲುಪಲು ಸಾಧ್ಯವಾಗುತ್ತದೆಯೆಂದರು.

ಪರಿಷತ್ ಗೌರವ ಅಧ್ಯಕ್ಷ ಎಸ್.ಎಂಪಟ್ಟಣಕರ್ ಮಾತನಾಡಿ, ಜನಪದ ನಮ್ಮ ದೇಶದ ಮೂಲ ಜೀವಾಳ. ಯಾವುದೇ ಶಾಲಾ-ಕಾಲೇಜಿಗೆ ತೆರಳದೆ ಜೀವನದ ನೈಜ ಮೌಲ್ಯಗಳನ್ನು ಒಳಗೊಂಡ ಸಾಹಿತ್ಯವನ್ನು ಜನಪದರು ರಚಿಸಿದ್ದಾರೆ. ಅಂತಹ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಹಬ್ಬಗಳು, ಉತ್ಸವಗಳು ಪೂರಕವಾಗಿವೆ. ಹಬ್ಬಗಳ ಹಿಂದಿನ ಅರ್ಥವನ್ನು ತಿಳಿದುಕೊಂಡು ಆಚರಿಸಿದರೆ ಉತ್ತಮವೆಂದು ನುಡಿದರು.

ಜಾನಪದ ಗಾಯಕ ಮರೆಪ್ಪ ಸುಗಂಧಿ ಅವರಿಂದ ಜರುಗಿದ ಜನಪದ ಗೀತೆಗಳು ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ಪರಿಷತ್ ಕಾರ್ಯದರ್ಶಿ ಪ್ರೊ.ಎಚ್.ಬಿ.ಪಾಟೀಲ, ಪ್ರಮುಖರಾದ ಬಸವಣ್ಣಪ್ಪ ಬಿರಾದಾರ, ಶ್ರೀಶೈಲ ಬಿರಾದಾರ, ಸಂಗಮೇಶ ಸರಡಗಿ, ಡಿ.ವಿ.ಕುಲಕರ್ಣಿ, ಸಂಜೀವಕುಮಾರ ಶೆಟ್ಟಿ, ಸೂರ್ಯಕಾಂತ ಸಾವಳಗಿ, ರವೀಂದ್ರ ಗುತ್ತೇದಾರ, ಶಿವಪುತ್ರಪ್ಪ ಗೊಬ್ಬುರ, ನಾಗೇಂದ್ರಪ್ಪ ದಂಡೋತಿಕರ್, ಶ್ರೀನಿವಾಸ ಬುಜ್ಜಿ, ಅಮರ ಬಂಗರಗಿ, ಬಸವರಾಜ ಎಸ್.ಪುರಾಣೆ, ಪ್ರದೀಪ ಕುಂಬಾರ, ಬಸವರಾಜ ಹೆಳವರ್, ಜಯಶ್ರೀ ಎಚ್.ಪಾಟೀಲ, ವಿಜಯಲಕ್ಷ್ಮೀ ಬೋಳಶೆಟ್ಟಿ, ನಂದಿನಿ ಚಿಮ್ಮಾ, ವಿದ್ಯಾ ಹೆಳವರ್, ಅನುರಾಧಾ ಬೋಳಶೆಟ್ಟಿ, ಸರಸ್ವತಿ ಬುಜ್ಜಿ ಸೇರಿದಂತೆ ಬಡಾವಣೆಯ ಅನೇಕರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ಶಿವಕಾಂತ ಚಿಮ್ಮಾ ಸ್ವಾಗತಿಸಿದರು. ವೀರೇಶ ಬೋಳಶೆಟ್ಟಿ ನಿರೂಪಿಸಿ, ವಂದಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago