ಸುರಪುರ: ಇದೇ ತಿಂಗಳ ರವಿವಾರ ರಾಷ್ಟ್ರಾದ್ಯಂತ ಜರಗುವ ಪೋಲಿಯೋ ಲಿಸಿಕಾ ಅಭಿಯಾನದ ಅಂಗವಾಗಿ ತಾಲೂಕಿನಲ್ಲಿಯೂ ಅಭಿಯಾನ ನಡೆಯಲಿದ್ದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಕರೆ ನೀಡಿದರು.
ನಗರದ ತಹಸೀಲ್ದಾರ ಕಚೇರಿಯಲ್ಲಿ ನಡೆದ ಇಲಾಖೆವಾರು ಕರ್ತವ್ಯ ಕೈಗೊಳ್ಳುವ ಬಗ್ಗೆ ನಡೆದ ಟಾಸ್ಕ್ ಫೋರ್ಸ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಪೋಲಿಯೋ ಲಸಿಕಾ ಅಭಿಯಾನದಲ್ಲಿ ತಾಲೂಕು ಪಂಚಾಯತಿಯಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಡಂಗುರ ಹಾಕಿಸುವ ಮೂಲಕ ಪಲ್ಸ್ ಪೋಲಿಯೋ ಬಗ್ಗೆ ಅರಿವು ಮೂಡಿಸುವುದು ,ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆಗೆ ಅವಕಾಶ ನೀಡುವುದು,ನಗರಸಭೆ ಆಯುಕ್ತರು ನಗರದಲ್ಲಿನ ಎಲ್ಲಾ ವಾರ್ಡುಗಳಲ್ಲಿ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸಲು ಆಟೋ ರಿಕ್ಷಾದ ಮೂಲಕ ಮೈಕಿಂಗ್ ಮೂಲಕ ಜಾಗೃತಿಗೆ ಕ್ರಮ ಕೈಗೊಳ್ಳುವುದು ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಪೋಲಿಯೋ ಹಾಕಿಸುವ ಬಗ್ಗೆ ಮಕ್ಕಳಿಂದ ಗ್ರಾಮಗಳಲ್ಲಿ ಜಾಗೃತಿ ಮೂಡಿಸುವ ಬಗ್ಗೆ ತಿಳಿಸಿದರು.
ಹಾಗು ಜೆಸ್ಕಾಂ ಇಲಾಖೆಗಳ ಅಧಿಕಾರಿಗಳು ೧೯ ರಿಂದ ೨೨ರ ವರೆಗೆ ನಾಲ್ಕು ದಿನಗಳವರೆಗೆ ತಾಲೂಕಿನ ೧೬ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯೂತ್ ಕಡಿತಗೊಳಿಸದೆ ಲಸಿಕಾ ಅಭಿಯಾನಕ್ಕೆ ಸಹಕರಿಸುವಂತೆ ತಿಳಿಸಿದರು.
೧೯ ರಂದು ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ಅಂಗನವಾಡಿ,ಬಸ್ ನಿಲ್ದಾಣ ಮತ್ತಿತರೆ ಸ್ಥಳಗಳಲ್ಲಿ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ. ನಂತರ ೨೦,೨೧ ಮತ್ತು ೨೨ ನೇ ತಾರೀಖಿನ ಮೂರು ದಿನಗಳು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ.ಅಲ್ಲದೆ ಬಸ್‌ಗಳಲ್ಲಿನ ಪ್ರಯಾಣಿಕರ ಮಕ್ಕಳಿಗೂ ಬಸ್‌ಲ್ಲಿ ಹೋಗಿ ನಮ್ಮ ಸಿಬ್ಬಂದಿ ಪೋಲಿಯೋ ಲಸಿಕೆ ಹಾಕಲಿದ್ದಾರೆ,ಇದಕ್ಕೆ ಕೆ.ಎಸ್.ಆರ್.ಟಿ.ಸಿ ಇಲಾಖೆಯು ಕೂಡ ಲಸಿಕೆ ಸಂದರ್ಭ ಐದು ನಿಮಿಷಗಳ ಕಾಲ ಬಸ್ ನಿಲ್ಲಿಸಲು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನವರು ಮಾತನಾಡಿ,ಪೋಲಿಯೋ ಅಭಿಯಾನದಲ್ಲಿ ಸ್ಥಳಿಯ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಭಾಗವಹಿಸಿ ಲಸಿಕೆ ಹಾಕಿಸುವಂತೆ ಜನರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.ಶಾಲಾ ಮಕ್ಕಳಿಂದ ಗ್ರಾಮದಲ್ಲಿ ಪೋಲಿಯೋ ಬಗ್ಗೆ ಜಾಗೃತಿ ಮೆರವಣಿಗೆ ನಡೆಸಲು ಸಲಹೆ ನೀಡಿದರು.
ಸಭೆಯಲ್ಲಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಲಾಲಸಾಬ್,ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಕಂಬಾರ,ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ವಿಶ್ವನಾಥ,ನಗರಸಭೆಯ ಸಿರಸ್ತೆದಾರ,ಬಿಇಒ ಕಚೇರಿಯ ನಿಂಗಪ್ಪ ಪೂಜಾರಿ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…