ಸುರಪುರ: ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ದಂಧೆ ಎಗ್ಗಿಲ್ಲದೆ ನಡೆದಿದ್ದು ಇದಕ್ಕೆ ಕೂಡಲೆ ಕಡಿವಾಣ ಹಾಕುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಸರಕಾರಕ್ಕೆ ಆಗ್ರಹಿಸಿದರು.
ನಗರದ ಡಾ:ಬಾಬಾ ಸಾಹೇಬ ಅಂಬೇಡ್ಕರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ತಾಲೂಕಿನ ಬೊಮ್ಮನಹಳ್ಳಿ (ಕೆ) ಗ್ರಾಮದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುವವರ ಹೆಸರುಗಳೊಂದಿಗೆ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ,ಇಂದಿಗೂ ಗ್ರಾಮದ ಮನೆಗಳಲ್ಲಿ,ಕಿರಾಣಿ ಅಂಗಡಿಗಳಲ್ಲಿಯೂ ಅಕ್ರಮ ಮದ್ಯ ಮಾರಾಟ ನಡೆದಿದೆ.ಕೂಡಲೆ ಮಾರಾಟ ತಡೆಯುವಂತೆ ಒತ್ತಾಯಿಸಿದರು.
ನಂತರ ನಗರದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯಿಲ್ಲದೆ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಕೂಡುವ ಸ್ಥಿತಿ ನಿರ್ಮಾಣವಾಗಿದೆ.ಶೌಚಾಲಯಗಳಲ್ಲಿ ಸ್ವಚ್ಛತೆಯಿಲ್ಲ,ಬಸ್ ನಿಲ್ಧಾಣದಲ್ಲಿ ಸದಾಕಾಲ ಹಂದಿ ದನಗಳಿಂದ ತುಂಬಿರುತ್ತದೆ.ಆದ್ದರಿಂದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು.ಭದ್ರತಾ ಸಿಬ್ಬಂದಿ ನೇಮಕಗೊಳಿಸಬೇಕು ಹಾಗು ಬಸ್ ನಿಲ್ದಾಣದಲ್ಲಿ ಕೆಂಭಾವಿ ಕಡೆಗೆ ಹೋಗುವ ರಸ್ತೆಯಲ್ಲಿ ದೊಡ್ಡದಾದ ಗುಂಡಿ ಬಿದ್ದಿದ್ದು ಇದನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಮತ್ತು ಈ ಬೇಡಿಕಗಳನ್ನು ಅನೇಕಬಾರಿ ಸಲ್ಲಿಸಿದರು ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ,ನಂತರ ಕಲ್ಯಾಣ ಕರ್ನಾಟಕ ಅಭಿವೃಧ್ಧಿ ಮಂಡಳಿ ಕಾರ್ಯದರ್ಶಿಯವರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಉಸ್ತಾದ ವಜಾಹತ್ ಹುಸೇನ,ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಶರಣಪ್ಪಗೌಡ ಪಾಟೀಲ,ದೇವಿಂದ್ರಪ್ಪ,ಶಳಿಗೆಪ್ಪಗೌಡ,ಭಿಮರಾಯ,ಹಣಮಂತ ಹೊಸಮನಿ,ಮಾಗರಾಜ ಡಿ,ಅಂಬ್ರೇಶ ಬಿ,ಬಸವರಾಜ ಹಸನಾಪುರ,ನಿಂಗಣ್ಣ ಅಮ್ಮಾಪುರ,ನಾಗಪ್ಪ ಹಸನಾಪುರ,ಭೀಮಣ್ಣ ತೇಕರಾಳ,ಶರಣಪ್ಪಗೌಡ ಪೋಲಿಸ್ ಪಾಟೀಲ,ತಿಪ್ಪಣ್ಣ ಕನ್ನೆಳ್ಳಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…