ಕಲಬುರಗಿ: 2018ರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗಿತ್ತು.
1203 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಕರ್ನಾಟಕ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಹೈದ್ರಾಬಾದ್ ಕರ್ನಾಟಕದ ಒಟ್ಟು 566 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮೂಲಕ ಆಯ್ಕೆಯಾಗಿದ್ದರು. ನಂತರದಲ್ಲಿ ಈ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಪರಿಶೀಲನಾ ಪ್ರಕ್ರಿಯೆಗಳನ್ನು ಮುಗಿಸಿ ಅಭ್ಯರ್ಥಿಗಳು ಅಂತಿಮವಾಗಿ ನೇಮಕಾತಿ ಆದೇಶವನ್ನು ಎದುರು ನೋಡುತ್ತಿದ್ದರು.
ಆದರೆ, ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ಹೈದ್ರಾಬಾದ್ ಕರ್ನಾಟಕೇತರ ಅಭ್ಯರ್ಥಿಗಳು ಕರ್ನಾಟಕ ಉಚ್ಛ ನ್ಯಾಯಾಲಯದಿಂದ ಮಧ್ಯಂತರ ತಡೆ ತಂದಿದ್ದಾರೆ. ಇದರಿಂದ ಹೈ-ಕ ಭಾಗದ ಅರ್ಹ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗಿದ್ದು ಅವರು ನನ್ನ ಬಳಿ ಬಂದು ನ್ಯಾಯ ದೊರಕಿಸಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ.
ಈ ಭಾಗದ ಒಬ್ಬ ಜನಪ್ರತಿನಿಧಿಯಾಗಿ ಅವರಿಗೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿಯಾಗಿದೆ.
ಆದ್ದರಿಂದ, ಆದಷ್ಟು ಶ್ರೀಘ್ರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸಚಿವರಾದ ಸುರೇಶ್ ಕುಮಾರ್ ಅವರ ಗಮನಕ್ಕೆ ತಂದಿದ್ದಾರೆ.
371J ಅಧಿನಿಯಮದ ಪ್ರಕಾರ ಹೈದ್ರಾಬಾದ್ ಕರ್ನಾಟಕದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…