ಬಿಜೆಪಿ ಲೋಕಸಭೆ ಚುನಾವಣೆ ನಂತರ ಸರ್ಕಾರ ಅಸ್ಥಿರಗೊಳಿಸಲು  ಕೈ ಹಾಕುವುದು ನಿಶ್ಚಿತ: ಸತೀಶ್ ಜಾರಕಿಹೊಳಿ

ಬೆಳಗಾವಿ: ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟ್ ಬಂದರೆ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಕೈ ಹಾಕುವುದು ನಿಶ್ಚಿತ ನಿಶ್ಚಿತ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಅವರು ಬೆಳಗಾವಿಯಲ್ಲಿ ಮಾತನಾಡಿ, ಬಿಜೆಪಿಗೆ 2014 ರಲ್ಲಿ ಬಂದ ಸಂಖ್ಯಾಬಲ ಬಿಜೆಪಿಗೆ ಬಂದ್ರೆ, ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಮಾಡ್ತಾರೆ. 23 ರ ನಂತರ ಕೆಂಪುಗೂಟದ ಕಾರುಗಳಲ್ಲಿ ಓಡಾಡುತ್ತಿರುವವರು ಮಾಜಿಯಾಗಲಿದ್ದಾರೆ ಎಂದು ಕುಟುಕಿದ ಅವರು, ರಮೇಶ ಜಾರಕಿಹೊಳಿಗೆ ಕಾರುಗಳ ಮೇಲಿನ ಕೆಂಪು  ದೀಪ ನಿಷೇಧವಾಗಿರೋದು ಗೊತ್ತಿಲ್ಲ ಅನಿಸುತ್ತೆ. ಅವನಿಗೆ ಏನೂ ಗೊತ್ತಿರೋದಿಲ್ಲ, ಗೊತ್ತಿಲ್ದೆ ಮಾತಾಡ್ತಾನೆ. ಅಧಿಕಾರ ಹೋದವರು ಮಾಜಿ ಆಗೇ ಆಗ್ತಾರೆ. ಮೇ 23 ಬಂದಾದ್ರೂ ಬರಲಿ ನೋಡೋಣ ಎಂದರು.

ಪ್ರಧಾನಿ ಮೋದಿ ವಿರುದ್ದ ಸತೀಶ್ ಜಾರಕಿಹೊಳಿ ಗರಂ:

ಪ್ರಧಾನಿ ಮೋದಿ ಎಲ್ಲ ಕಡೆ ಆಪರೇಷನ್ ಕಮಲ ಮಾಡ್ತಿದಾರೆ. ಇರೋ ಸರ್ಕಾರವನ್ನ ಅಸ್ಥಿರ ಮಾಡ್ತಿದಾರೆ. ಪ್ರಜಾಪ್ರಭುತ್ವದಲ್ಲಿ ಮೋದಿ ನಡೆ ಸರಿಯಲ್ಲ. ಮೋದಿ ಕಾಲದಲ್ಲಿ ಇದು ಕಾಮನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ. ಅಲ್ಲಲ್ಲಿ ಅಸಮಾಧಾನ ಇದೆ. ಮುಂದಿನ ದಿನಗಳಲ್ಲಿ ಎಲ್ಲ ಸರಿಹೋಗಲಿದೆ. ಅದರಿಂದ ಸರ್ಕಾರಕ್ಕೆ ಏನೂ ಧಕ್ಕೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೃಷ್ಣಾ ನದಿಗೆ ನೀರು ಬಿಡುವ ವಿಚಾರವಾಗಿ ಈಗಾಗಲೇ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಇಂದು ಅಥವಾ ನಾಳೆ ನೀರು ಬರುವ ವಿಶ್ವಾಸವಿದೆ ಎಂದರು.

ಡಿ.ಕೆ.ಶಿವಕುಮಾರ ಕುಂದಗೋಳ ಉಪ ಚುನಾವಣೆ ಉಸ್ತುವಾರಿ ವಹಿಸಿದ್ದಕ್ಕೆ ನನಗೆ ಅಸಮಾಧಾನವಿಲ್ಲ.  ನಾನು ಆ ಬಗ್ಗೆ ಮಾತನಾಡೇ ಇಲ್ಲ. ಡಿಕೆಶಿ ಗೆ ಈಗ ಕನ್ವಿನೆನ್ಸ್ ಆಗಿದೆ ನಾನು ಮಾತನಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago