ಬಿಸಿ ಬಿಸಿ ಸುದ್ದಿ

ಬಳಗಕ್ಕೆ ಸಂಚಾಲಕರಾಗಿ ಬಡಿಗೇರ, ಮಠಪತಿ ನೇಮಕ

ಕಲಬುರಗಿ: ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ದಿಸೆಯಲ್ಲಿ ಸ್ಥಾಪಿಸಿಕೊಂಡಿರುವ ಸಹೃದಯಿ ಸ್ನೇಹ ಬಳಗದ ಸಂಚಾಲಕರನ್ನಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ ಹಾಗೂ ಜನಪರ ಚಿಂತಕ ನಾಗಲಿಂಗಯ್ಯಾ ಜಿ.ಮಠಪತಿ ಅವರನ್ನು ನೇಮಕ ಮಾಡಿ, ಹೂಗುಚ್ಚ ನೀಡಿ ವಿಶೇಷವಾಗಿ ಗೌರವಿಸಲಾಯಿತು.

ನಾಡು-ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳ ಬೆಳವಣಿಗೆಗಾಗಿ ಈ ಭಾಗದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಳೆದ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವವರು ಒಂದೆಡೆ ಸೇರಿ ಸ್ಥಾಪಿಸಿಕೊಂಡಿರುವ ಬಳಗ ಇದಾಗಿದೆ.
ಮುಂದಿನ ದಿನಗಳಲ್ಲಿ ತಿಂಗಳಿಗೊಂದರಂತೆ ವಿಶೇಷ ಮತ್ತು ವಿನೂತನ ಕಾರ್ಯಕ್ರಮಗಳನ್ನು ರೂಪಿಸುವ ಯೋಜನೆಯನ್ನು ರೂಪಿಸಿದ್ದು, ಅದಕ್ಕೆ ಸಂಚಾಲಕರನ್ನಾಗಿ ಇವರನ್ನು ನೇಮಕ ಮಾಡಲಾಗಿದೆ.

ಸಹೃದಯಿ ಸ್ನೇಹ ಬಳಗದ ಪ್ರಮುಖರಾದ ವಿಜಯಕುಮಾರ ತೇಗಲತಿಪ್ಪಿ, ಹಣಮಂತರಾಯ ಅಟ್ಟೂರ, ಶರಣರಾಜ್ ಛಪ್ಪರಬಂದಿ, ರವಿ ಶಹಪುರಕರ್, ಶಿವಾನಂದ ಮಠಪತಿ, ಸಂಗಮೇಶ ಶಾಸ್ತ್ರಿ ಮಾಶಾಳ, ರಾಜಕುಮಾರ ಉದನೂರ, ಜಗದೀಶ ಪಾಟೀಲ, ಬಸವರಾಜ ರಾವೂರ, ಪ್ರಮೋದ ಕಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago