ಕಲ್ಯಾಣ ಕರ್ನಾಟಕಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆಗೆ ಲಕ್ಷ್ಮಣ ದಸ್ತಿ ಒತ್ತಾಯ

0
82

ಕಲಬುರಗಿ: 371ನೇ ಕಲಂ ತಿದ್ದುಪಡಿಯ ವಿಶೇಷ ಸ್ಥಾನಮಾನ ಪಡೆದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಕಾಲಮಿತಿಯ ಪ್ರಗತಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅತಿ ಗಂಭೀರವಾಗಿ ಪರಿಗಣಿಸಿ, ಬರುವ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆಧ್ಯತೆ ನೀಡಿ ಸರಕಾರ ಈಗಾಗಲೇ ಘೋಷಿಸಿರುವ ಯೋಜನೆಗಳಿಗೆ ಅನುಷ್ಠಾನ ಮಾಡುವುದು ಮತ್ತು ಹೊಸ ಯೋಜನೆಗಳು ಮಂಜೂರಾತಿಗೆ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಿ ಈ ಭಾಗಕ್ಕೆ ನ್ಯಾಯ ಒದಗಿಸಬೇಕೆಂದು ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಅವರು ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆಗೆ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ನಂಜುಂಡಪ್ಪ ವರದಿಯ ಮಾನದಂಡವನ್ನು ಆಧರಿಸಿ ಕಲ್ಯಾಣ ಕರ್ನಾಟಕದ ಒಂದು“ಗ್ರಾಮಪಂಚಾಯತಿಯನ್ನು ಕೇಂದ್ರವನ್ನಾಗಿ ಮಾಡಿಕೊಂಡು ತಜ್ಞರನ್ನೊಳಗೊಂಡು ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಗ್ರ ಅಧ್ಯಯನ ನಡೆಸಿ ಕಾಲಮಿತಿಯಲ್ಲಿ ವರದಿ ಸಿದ್ಧಪಡಿಸಿ ಅದರ ಆಧಾರದ ಮೇಲೆ ಭವಿಷ್ಯದ ಎಲ್ಲಾ ಯೋಜನೆಗಳನ್ನು ರೂಪಿಸಿ,  371ನೇ ಕಲಂ ತಿದ್ದುಪಡಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವಂತೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮತ್ತು ಇದಕ್ಕೆ ಸಂಬಂಧಿಸಿದ ವಿಶೇಷ ಕಚೇರಿಗಳು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಪರಿಹಾರ ಒದಗಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

Contact Your\'s Advertisement; 9902492681

ಕೇಂದ್ರ ಮತ್ತು ರಾಜ್ಯ ಸರಕಾರ ಬರುವ ಬಜೆಟ್ ನಲ್ಲಿ ಗಂಭೀರವಾಗಿ ಪರಿಗಣಿಸಿ ಸ್ಥಳೀಯ ಮಟ್ಟದಲ್ಲಿರುವ ಬೇಡಿಕೆಗಳು ಪ್ರಾದೇಶಿಕ ಆಯುಕ್ತರಿಗೆ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಹಂತವಾಗಿ ಜನಪ್ರತಿನಿಧಿಗಳಿಗೆ ಸಚಿವರಿಗೆ, ಸಂಸದರಿಗೆ ಮನವಿಗಳನ್ನು ಸಲ್ಲಿಸಲಾಗುವುದು. ಈ ಬಗ್ಗೆ ಸರಕಾರ ಮತ್ತು ನಮ್ಮ ಭಾಗದ ಸಚಿವರು, ಸಂಸದರು, ಶಾಸಕರು ಗಂಭೀರವಾಗಿ ಪರಿಗಣಿಸಬೇಕೆಂದು ಸಮಿತಿ ಆಗ್ರಹಿಸಿದೆ.

ಡಾ.ಬಸವರಾಜ ಕುಮನೂರ, ಪ್ರೊ.ಸಂಗೀತಾ ಕಟ್ಟಿ, ಮನೀಷ್ ಜಾಜು, ಡಾ. ಮಾಜಿದ್ ದಾಗಿ, ಶಿವಲಿಂಗಪ್ಪ ಭಂಡಕ್, ಅಬ್ದುಲ ರಹಿಂ, ಅಸ್ಲಂ ಚೌಂಗೆ, ಆನಂದ ದೇಶಪಾಂಡೆ, ವಿಶಾಲದೇವ, ಜ್ಞಾನಮಿತ್ರ, ಸಂಧ್ಯಾರಾಜ ಸ್ಯಾಮ್ಯುವೆಲ್, ಭಗವಂತರಾವ ಪಾಟೀಲ್ ಸೇರಿದಂತೆ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here