ಅರಣ್ಯ ಖಾಯ್ದೆ ಅನುಷ್ಠಾನ ಹಾಗೂ ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಮೇ.6ರಂದು ಪ್ರತಿಭಟನೆ

0
60

ಮೈಸುರು: ಅರಣ್ಯ ಖಾಯ್ದೆ ಅನುಷ್ಠಾನ ಹಾಗೂ ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಮೇ.6ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳಲಾಗುವುದೆಂದು ಬುಡಕಟ್ಟು ಸಮುದಾಯಗಳ ಒಕ್ಕೂಟದ ಸಂಚಾಲಕ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಅವರು ಇಲ್ಲಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಅರಣ್ಯ ಮೂಲ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಬುಡಕಟ್ಟು ಸಮುದಾಯಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಲಾಗುತ್ತಿದೆ. ಆದರೆ ನಮಗೆ ಪುನರ್ವಸತಿ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಅರಣ್ಯ ಹಕ್ಕು ಕಾಯ್ದೆಯಿಂದ ಬುಡಕಟ್ಟು ಹಾಗೂ ಆದಿವಾಸಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ಸುಪ್ರೀಂ ಕೋರ್ಟ್ ನ ತೀರ್ಪು ಬುಡಕಟ್ಟು ಸಮುದಾಯವನ್ನು ಅತಂತ್ರಕ್ಕೆ ಸಿಲುಕಿಸಿದೆ ಎಂದು ಹೇಳಿದರು.

Contact Your\'s Advertisement; 9902492681

ಕೂಡಲೇ ಕರ್ನಾಟಕ ಸರ್ಕಾರ ಆದಿವಾಸಿಗಳ ವಿರುದ್ದವಾಗಿರುವ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಸರ್ವೋಚ್ಚ ನಾಯಾಲಯಕ್ಕೆ ದಾವೆ ಸಲ್ಲಿಸಿ ಬುಡಕಟ್ಟು ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಬುಡಕಟ್ಟು ಸಮುದಾಯಗಳಿಂದ ಹೆಚ್.ಡಿ.ಕೋಟೆ ಪಟ್ಟಣದ ಮಿನಿ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಮೇ.6ರಂದು ಬೃಹತ್ ಮಟ್ಟದಲ್ಲಿ ಅಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹವನ್ನು ಮಾಡಲಾಗುವುದೆಂದು ಸುದ್ದಿಗೋಷ್ಠಿಯಲ್ಲಿ ಶೈಲೇಂದ್ರ ಕುಮಾರ್ ತಿಳಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here