ಕಲಬುರಗಿ: ಮಹಿಳೆಯರಿಗೆ ಸಂವಿಧಾನದಲ್ಲಿ ಪ್ರತ್ಯೇಕವಾದ ಮೀಸಲಾತಿ ನೀಡಲಾಗಿದೆ. ಆ ಮೀಸಲಾತಿಯ ಹಕ್ಕನ್ನು ಚಲಾಯಿಸಿ ತಮ್ಮ ಗ್ರಾಮಗಳ ಅಭಿವೃದ್ದಿಗೆ ಶ್ರಮವಹಿಸಿ ಎಂದು ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕರಾದ ಆನಂದ ರಾಜ್ ಅವರು ಸಲಹೆ ನೀಡಿದರು.
ಚಿತ್ತಾಪೂರ ತಾಲೂಕಿನ ಮರತೂರ ಗ್ರಾಮದಲ್ಲಿ ’ಸ್ವಿಫ್ ಅಭಿಯಾನ’ ಯೋಜನೆಯಡಿಯಲ್ಲಿ ಮಹಿಳಾ ಪ್ರತಿನಿಧಿಗಳಿಗಾಗಿ ಹಮ್ಮಿಕೊಂಡಿರುವ ’ಮಹಿಳಾ ಮೀಸಲಾತಿ ಕುರಿತ ಜಾಗೃತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಂಚಾಯತಿಗಳಲ್ಲಿ ಸದಸ್ಯರಾಗಿ ಆಯ್ಕೆಯಾದ ಮಹಿಳೆಯರು ಜಾಗೃತರಾಗಬೇಕು. ನಾಲ್ಕು ಗೋಡೆಗಳ ಮಧ್ಯೆ ಇರೋದನ್ನು ಬಿಟ್ಟು ಪಂಚಾಯತಿಗಳತ್ತವೂ ಮುಖಮಾಡಿ ಅಲ್ಲಿ ಏನು ನಡೆಯುತ್ತಿದೆಯೊ ಎನ್ನೋದನ್ನು ಅರ್ಥಮಾಡಿಕೊಂಡು ಪ್ರಶ್ನೆ ಮಾಡಿದರೆ ಮಾತ್ರ ತಮ್ಮ ಹಳ್ಳಿಗಳು ಅಭಿವೃದ್ದಿ ಆಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ತಮಗೆ ಪಂಚಾಯತಿಗಳಲ್ಲಿ ಅವಕಾಶ ನೀಡಲಾಗಿರುತ್ತದೆ. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವುದನ್ನು ಪ್ರತಿಯೊಬ್ಬ ಮಹಿಳೆಯೂ ರೂಢಿಸಿಕೊಳ್ಳಬೇಕು. ಮನೆಯಿಂದ ಹೊರಬಂದು ಪಂಚಾಯತಿ ಕಾರ್ಯ ಕಲಾಪಗಳಲ್ಲಿ ಭಾಗವಹಿಸಿ ಅಭಿವೃದ್ದಿ ಕೆಲಸಗಳನ್ನು ಮಾಡಿದಾಗ ಮಾತ್ರ ತಾವು ಗೆದ್ದಿದ್ದಕ್ಕೂ ಸ್ವಾರ್ಥಕವಾಗುತ್ತದೆ ಎಂದರು.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. ೫೦ರಷ್ಟು ಮೀಸಲಾತಿ ಇದೆ. ಅದರ ಸದುಪಯೋಗ ಪಡಿದುಕೊಳ್ಳಬೇಕು. ಜೊತೆಗೆ ಚುನಾವಣೆಯಲ್ಲಿ ಗೆದ್ದು ಬಂದಿರುವ ಮಹಿಳಾ ಪ್ರತಿನಿಧಿಗಳಾದ ನೀವು ಪಂಚಾಯತಿ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಆಗದೇ ಹೋದ್ರೆ ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಲಲೀತಾ ದೇವಾನಂದ ಪೂಜಾರಿ ಅವರು ಉದ್ಘಾಟಿಸಿದರು.
ಸಂಯೋಜಕ ಶ್ರೀನಿವಾಸ ಕುಲಕರ್ಣಿ, ತಂಡದ ಸದಸ್ಯೆ ಯಲ್ಲುಬಾಯಿ ಮುಗಳೇಕರ್, ಗ್ರಾಮ ಪಂಚಾಯತಿ ಸದಸ್ಯೆ ಕಲ್ಪನಾ ಗುರುನಾಥ ಕಾಂಬಳೆ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…