ಬಿಸಿ ಬಿಸಿ ಸುದ್ದಿ

‘ರಂಗದರ್ಶನ’ ಕಾರ್ಯಕ್ರಮ: ನೋವು ನಿವಾರಿಸಿ ನಲಿವನ್ನು ನೀಡುವುದೇ ರಂಗದರ್ಶನ: ತೇಗಲತಿಪ್ಪಿ

ಕಲಬುರಗಿ: ರಂಗಭೂಮಿ ವ್ಯಕ್ತಿಯ ಜಡತ್ವವನ್ನು ಹೋಗಲಾಡಿಸಿ ಚಿಂತನೆಗೆ ಹಚ್ಚುವುದು. ನೋವುಗಳನ್ನು ನಿವಾರಿಸಿ ನಲಿವನ್ನು ನೀಡುತ್ತದೆ ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹೇಳಿದರು.

ನಗರದ ಜಯನಗರದಲ್ಲಿರುವ ವಾಣಿ ವಿಲಾಸ ಶಾಲೆಯ ಆವರಣದಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿಗಳಿಗಾಗಿ ‘ರಂಗ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಬದುಕಿನ ಎಲ್ಲ ಕ್ಷೇತ್ರಗಳಲ್ಲೂ ರಂಗಭೂಮಿಯ ಪ್ರಭಾವ ಇದ್ದೇ ಇದೆ. ಅದರಲ್ಲೂ ಶಿಕ್ಷಣದಲ್ಲಿ ರಂಗಭೂಮಿಯ ಬಳಕೆ ಇಂದು ಅತ್ಯಂತ ಅವಶ್ಯಕವಿದೆ ಎಂದರು.
ಮುಂದುವರೆದು ಮಾತನಾಡಿದ ಅವರು, ಸಿನೇಮಾ, ವಿದ್ಯುನ್ಮಾನ, ಮೊಬೈಲ್ ರಂಜನೆಗಳ ನಡುವೆ ಭಾರತೀಯ ಸಂಸ್ಕೃತಿಯ ಕಲಾ ಪರಂಪರೆ, ಜಾನಪದ ಸೊಗಡು ಇಂದು ಮೂಲೆ ಗುಂಪಾಗುತ್ತಿದ್ದು, ಅವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಕಾರ್ಯಗಳಾಗಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದರು.

ಸಂಸ್ಥೆಯ ಅಧ್ಯಕ್ಷ ಕೆ.ವಿ.ಎಲ್.ಪ್ರಸಾದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ರಂಗಭೂಮಿಯ ಅಭಿರುಚಿಯನ್ನು ಬೆಳೆಸುವ ಉದ್ದೇಶದಿಂದ ಹೊಸ ಪ್ರಯೋಗವೆಂಬಂತೆ ‘ರಂಗದರ್ಶನ’ ವಿಶೇಷ ಕಾರ್ಯಕ್ರಮ ಪ್ರತಿ ವರ್ಷ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ಸಂಸ್ಥೆಯ ವಾಣಿ ಪ್ರಸಾದ, ವಾಣಿ ವಿಲಾಸ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಡಾ.ಪೂಜಾ ಉತ್ತಮಕುಮಾರ, ಕಿರುತೆರೆ ನಿರ್ದೇಶಕರಾದ ಉತ್ತಮಕುಮಾರ, ಯಶ್ವಂತ ಹುಚಬಾಳ್, ಶಿವಾನಂದ ಮಠಪತಿ ವೇದಿಕೆ ಮೇಲಿದ್ದರು.
ನಂತರ ವಿದ್ಯಾರ್ಥಿಗಳಿಂದ ನಾಟಕ, ರಂಗ ಗೀತೆ, ಜಾನಪದ ನೃತ್ಯ ಸೇರಿದಂತೆ ಅನೇಕ ಪ್ರಯೋಗಳು ನಡೆಸಿ ನೆರೆದಿದ್ದ ಪಾಲಕರ ಮನಸೂರೆಗೊಳಿಸಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago