ಕಲಬುರಗಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸುವಂತೆ ಜಾಗೃತಿ ಮೂಡಿಸುವ ಪ್ರಚಾರ ರಥಕ್ಕೆ ಶುಕ್ರವಾರ ನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಾಹಿತ್ಯ ಸಮ್ಮೇಳನದ ಪ್ರಚಾರ ಸಮಿತಿ ಅಧ್ಯಕ್ಷ ವೀರಭದ್ರ ಸಿಂಪಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕ ಶಂಕರ ಖಾದಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಹೆಚ್.ಜಿ., ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಇದ್ದರು.