ಕಲಬುರಗಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗಳು ಸೇರಿದಂತೆ ಇದೂವರೆ ೩೭೪ ಪುಸ್ತಕ ಮತ್ತು ೧೯೮ ವಾಣಿಜ್ಯ ಸೇರಿದಂತೆ ಒಟ್ಟು ೫೭೨ ಮಳಿಗೆ ಸ್ಥಾಪನೆಗೆ ನೊಂದಣಿಯಾಗಿವೆ ಎಂದು ಪುಸ್ತಕ ಪ್ರದರ್ಶನ ಮತ್ತು ಮಳಿಗೆಗಳ ಸಮಿತಿಯ ಅಧ್ಯಕ್ಷರಾದ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರು ತಿಳಿಸಿದರು.
ಅವರು ನಗರದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪುಸ್ತಕ ಪ್ರದರ್ಶನ ಹಾಗೂ ವಾಣಿಜ್ಯ ಮಳಿಗೆಗಳ ರೂಪರೇಷೆ ಮತ್ತು ಸಿದ್ಧತೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಒಟ್ಟಾರೆ ೮೦೦ ಮಳಿಗೆ ಸ್ಥಾಪಿಸಲು ಅಂದಾಜಿಸಲಾಗಿದೆ. ಈ ಬಾರಿ ಸಮ್ಮೇಳನದಲ್ಲಿ ನೆಲಕ್ಕೆ ಮ್ಯಾಟ್ ಅಳವಡಿಸಿ ಆ ಮೂಲಕ ಧೂಳನ್ನು ತಡೆಗಟ್ಟುವುದು ಹಾಗೂ ಹಿರಿಯ ನಾಗರಿಕರಿಗೆ ೫-೧೦ ವ್ಹಿಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗುವುದು. ವ್ಯಾಪಕ ಭದ್ರತೆ ಜೊತೆಗೆ ಸಾಹಿತಿಗಳು ಹಾಗೂ ಬರಹಗಾರರನ್ನು ಪುಸ್ತಕ ಮಳಿಗೆಗಳಲ್ಲಿ ಮಾತನಾಡಿಸುವ ಅಥವಾ ಚರ್ಚಿಸುವ ಸಾಮಾನ್ಯರಿಗೆ ಪುಸ್ತಕ ಮಳಿಗೆಯಲ್ಲಿ ಲೇಖಕರ ಲಾಂಜ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಈ ಮಳಿಗೆಗಳ ಸನಿಹದಲ್ಲಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಿರಿಯ ಸಾಹಿತಿಗಳು, ಸಮಿತಿಯ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ ಸಲಹೆ ಸೂಚನೆ ನೀಡಿದ್ದಾರೆ. ಸಮ್ಮೇಳನದ ಯಶಸ್ವಿಗೆ ಅಗತ್ಯವಿರುವ ಸಲಹೆ, ಸೂಚನೆ ಮಾರ್ಗದರ್ಶಗಳನ್ನು ಪಾಲಿಸಲಾಗುವುದು. ಶೇ. ೫೦ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಾಗಿ ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಕ್ಕಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಆಸಕ್ತರು ಪುಸ್ತಕ ಖರೀದಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಂಜೀವನ ರಮೇಶ ಯಾಕಾಪುರ, ಶಿವಶರಣಪ್ಪ ರಾಜೇಂದ್ರಪ್ಪ ಶಂಕರ, ದೇವಕಿ ಚೆನ್ನಮಲ್ಲಯ್ಯ ಹಿರೇಮಠ, ವಿಜಯಲಕ್ಷ್ಮಿ ಹಿರೇಮಠ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಬಸವರಾಜ ವಾಲಿ, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಬಿ.ಶರಣಪ್ಪ, ಕರ್ನಾಟಕ ನೀರಾವರಿ ನಿಗಮ ಬೆಣ್ಣೆತೊರಾ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಪಾರ್ವತಿ ರೆಡ್ಡಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಅಜಯ ಕುಮಾರ, ಸಿ.ಯು.ಕೆ. ಗ್ರಂಥಾಲಯದ ಅಧಿಕಾರಿ ಪರಶುರಾಮ ಕಟ್ಟಿಮನಿ, ಕೆವಿಕೆ ಮುಖ್ಯಸ್ಥ ಡಾ.ರಾಜು ತೆಗ್ಗಳ್ಳಿ, ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯಾಧಿಕಾರಿ ಗಣಪತಿ ಶಿಂಧೆ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಂಜುನಾಥ, ತಯಾರಿಕಾ ಸಂಘಗಳ ಅಧ್ಯಕ್ಷ ರವಿಂದ್ರ ಮುಕ್ಕಾ, ಆಯಿಲ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಅರುಣಕುಮಾರ, ಶಿವಣಗೌಡ ಪಾಟೀಲ ಹಂಗರಗಿ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…