ಕಲಬುರಗಿ: ಫೆಬ್ರವರಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಸ್ಚಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಚ್ಚತಾ ಸಮಿತಿಯ ಅಧ್ಯಕ್ಷರಾದ ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಹೇಳಿದರು.
ಶುಕ್ರವಾರ ನಗರದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಜರುಗಿದ ಸ್ವಚ್ಚತಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ವೇದಿಕೆ ಸುತ್ತ-ಮುತ್ತ, ವಾಹನ ನಿಲುಗಡೆ ಸ್ಥಳವನ್ನು ಈಗಾಗಲೇ ಸ್ವಚ್ಛಗೊಳಿಸಲಾಗಿದೆ. ಊಟದ ತಟ್ಟೆ ಹಾಗೂ ನೀರು ಕುಡಿದು ಬಿಸಾಡಿದ, ಕಸವನ್ನು ಆಗಿಂದಾಗೆ ತೆರವುಗೊಳಿಸಲು ಸ್ವಚ್ಛತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳ ಸ್ಥಳವು ಹೆಚ್ಚಿನ ಜನಸಂದಣಿ ಇರುವುದರಿಂದ ಅಲ್ಲಿ ಸ್ಚಚ್ಛವಾಗಿಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ.ಜಾದವ್ ಮಾತನಾಡಿ, ಈಗಾಗಲೇ ಸ್ವಚ್ಚತಾ ಕಾರ್ಯಕ್ಕೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಸ್ವಚ್ಛತೆಯ ಎಲ್ಲಾ ಕೆಲಸಗಳನ್ನು ಪಾಲಿಕೆ ವತಿಯಿಂದಲೇ ಮಾಡಲಾಗುತ್ತದೆ. ಸ್ವಚ್ಛತೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕಸ ಹಾಕಲು ದೊಡ್ಡ ಡ್ರಮ್‌ಗಳನ್ನು ಖರೀದಿಸಲಾಗುತ್ತಿದೆ. ಸಮಿತಿಯ ಎಲ್ಲಾ ಸದಸ್ಯ ಮತ್ತು ಅಧಿಕಾರಿಗಳಿಗೆ ನಿಗದಿತ ಕೆಲಸಗಳನ್ನು ನೀಡಲಾಗುತ್ತದೆ. ಸಮ್ಮೇಳನ ನಡೆಯುವ ಸ್ಥಳದಲ್ಲಿ ಕಾರ್ಪೆಟ್‌ಗಳನ್ನು ಅಳವಡಿಸಲಾಗುತ್ತದೆ. ರಾತ್ರಿ ಸಮಯದಲ್ಲಿ ರಸ್ತೆಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ದಶವಂತ ಗಾಜರೆ, ಪರಿಸರ ಅಭಿಯಂತ ಮುನಾಫ್ ಪಟೇಲ್, ಸ್ವಚ್ಛತಾ ಸಮಿತಿ ಸದಸ್ಯರುಗಳು ಸೇರಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…