ಬಿಸಿ ಬಿಸಿ ಸುದ್ದಿ

ದೇಶದ ಹಿತದೃಷ್ಟಿಯಿಂದ ಪೌರತ್ವ ಕಾಯ್ದೆ ಜಾರಿ: ದೊಡ್ಡಪ್ಪಗೌಡ ಪಾಟೀಲ ನರಿಬೋಳ

ಶಹಾಬಾದ: ಬಿಜೆಪಿ ಪೌರತ್ವ ಕಾಯ್ದೆ ತರುವ ಮೂಲಕ ಈ ದೇಶದ ಅಲ್ಪಸಂಖ್ಯಾತ ಸಮುದಾಯದವರನ್ನು ದೇಶದಿಂದ ಹೊರಹಾಕುತ್ತಾರೆ ಎಂದು ಕಾಂಗ್ರೆಸ್‌ನವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.ಆದರೆ ಯಾವುದೇ ಕಾರಣಕ್ಕೂ ಈ ದೇಶದಿಂದ ಹೊರಹಾಕುವ ಪ್ರಶ್ನೆಯೇ ಇಲ್ಲ ಎಂದು ಮನವರಿಕೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

ಅವರು ಶುಕ್ರವಾರ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಕಲಬುರಗಿ ಗ್ರಾಮೀಣ ಬಿಜೆಪಿ ಮಂಡಲ ಹಾಗೂ ಶಹಾಬಾದ ಬಿಜೆಪಿ ಮಂಡಲದ ನೂತನ ಅಧ್ಯಕ್ಷರ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಲೋಕಸಭೆ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಮೂಲಕ ಡಾ.ಉಮೇಶ ಜಾಧವ ಅವರಿಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದಿಂದ ೨೦ ಸಾವಿರ ಮತ ಲೀಡ್ ಕೊಟ್ಟಿದ್ದೆವೆ. ನನಗೆ ಹಾಗೂ ಮಾಲಿಕಯ್ಯ ಗುತ್ತೆದಾರ ಅವರಿಗೆ ಮಂತ್ರಿ ಸಿಗದಿದ್ದರೂ ಪರವಾಗಿಲ್ಲ.ಆದರೆ ಈ ಭಾಗದ ಅಭಿವೃದ್ಧಿಯಾಗಬೇಕೆಂದು ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಂಡಿದ್ದೆವೆ           -ಬಸವರಾಜ ಮತ್ತಿಮಡು ಶಾಸಕರು ಕಲಬುರಗಿ ಗ್ರಾಮೀಣ ಮತಕ್ಷೇತ್ರ.

ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋಡಿಯವರು ಪೌರತ್ವ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೆ ಕಾಂಗ್ರೆಸ್‌ನವರು ಮುಸ್ಲಿಂ ಸಮುದಾಯದವರನ್ನು ಎತ್ತಿ ಕಟ್ಟಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ.ಏನೇ ಆದರೂ ಪೌರತ್ವ ಕಾಯ್ದೆಯನ್ನು ಹಿಂದಕ್ಕೆ ತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಗೃಹ ಸಚಿವ ಅಮಿತ ಶಾ ಘಂಟಾಘೋಷವಾಗಿ ಹೇಳಿದ್ದಾರೆ.ಈಗಾಗಲೇ ಕಲಬುರಗಿ ನಗರದಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಕಾಯ್ದೆಯನ್ನು ಬೆಂಬಲಿಸಿ ಲಕ್ಷಾಂತರ ಜನರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದು ನೋಡಿದರೇ ಎಲ್ಲರೂ ಬೆಂಬಲಿಸಿದ್ದಾರೆ.ಆದರೆ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡು ಹತಾಶರಾಗಿ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಕಾಯ್ದೆಯನ್ನು ವಿರೋಧಿಸಿ ಕಲಬುರಗಿಯಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿ.ಎಮ್.ಇಬ್ರಾಹಿಂ ಇತರ ಮುಖಂಡರು ಕಾಯ್ದೆಯ ಬಗ್ಗೆ ಮಾತನಾಡದೇ ಕೇವಲ ಮೋದಿ, ಅಮಿತ್ ಶಾ, ಆರ್‌ಎಸ್‌ಎಸ್ ಟೀಕೆ ಮಾಡುವುದೊಂದೆ ಕೆಲಸ ಮಾಡಿದ್ದಾರೆ. ಕಣ್ಣು ತೆಗೆದರೂ, ಕಣ್ಣು ಮುಚ್ಚಿದರೂ ಮೋದಿ, ಅಮಿತ್ ಶಾ ಕಾಣಿಸುತ್ತಿದ್ದಾರೆ ಎಂದು ವ್ಯಂಗ ಮಾಡಿದರು.ಈಗಾಗಲೇ ಸುಪ್ರೀಂ ಕೋರ್ಟನಲ್ಲಿ ತಡೆಯಾಜ್ಞೆಗಾಗಿ ಸಲ್ಲಿಸಿದ ಅರ್ಜಿ ತೀರಸ್ಕರಿಸಲಾಗಿದೆ.ಇಂತಹ ನೂರಾರು ಅರ್ಜಿ ಸಲ್ಲಿಸಿದರೂ ಕಾಯ್ದೆಯನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ. ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯ ಬಗ್ಗೆ ಬಿಜೆಪಿ ಮಂಡಲದ ಮುಖಂಡರು, ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಬೇಕೆಂದು ಹೇಳಿದರು. ಮುಖಂಡ ಸುಭಾಷ ಬಿರಾದಾರ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶಶಿಕಲಾ ಟೆಂಗಳಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಕಲಬುರಗಿ ಗ್ರಾಮೀಣ ನೂತನ ಅಧ್ಯಕ್ಷ ಸಂಗಮೇಶ ವಾಲಿ ಹಾಗೂ ಶಹಾಬಾದ ಮಂಡಲದ ನೂತನ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರನ್ನು ಸನ್ಮಾನಿಸಲಾಯಿತು.

ಆಳಂದ ಶಾಸಕ ಸುಭಾಷ ಗುತ್ತೆದಾರ, ಮುಖಂಡರಾದ ರವಿ ಬಿರಾದಾರ,ದಿವ್ಯ ಹಾಗರಗಿ,ರೇವಣಸಿದ್ದಪ್ಪ ಮೂಲಗೆ, ರಾಜಕುಮಾರ ಕೋಟೆ, ಲಿಂಗರಾಜ ಬಿರಾದಾರ, ಶಶಿಕಲಾ ಟೆಂಗಳಿ, ವಿಜಯಲಕ್ಷ್ಮಿ ರಾಗಿ, ನರೇಂದ್ರ ವರ್ಮಾ, ಸುಭಾಷ ಜಾಪೂರ,ಅನೀಲ ಬೋರಗಾಂವಕರ್,ಅರುಣ ಪಟ್ಟಣಕರ್,ಅಶೋಕ ಜಿಂಗಾಡೆ, ನಿಂಗಣ್ಣ ಹುಳಗೋಳಕರ್,ಹರ್ಷವರ್ಧನ ಕೋಗಲೆ, ಅಣೆಪ್ಪ ಇಂಗಿನಶೆಟ್ಟಿ, ಭಾಗಿರಥಿ ಗುನ್ನಾಪೂರ, ಸಿದ್ದಣ್ಣಗೌಡ ಮಾಲಿ ಪಾಟೀಲ, ಅರವಿಂದ ಚವ್ಹಾಣ, ರವಿ ರಾಠೋಡ, ಬಸವರಾಜ ಬಿರಾದಾರ ಸೇರಿದಂತೆ ನಗರಸಭೆಯ ಸದಸ್ಯರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago