ಬಿಸಿ ಬಿಸಿ ಸುದ್ದಿ

ಜಯಂತಿಗಳನ್ನು ಸರಳವಾಗಿ ಅರ್ಥಪೂರ್ಣವಾಗಿ ಆಚರಿಸಬೇಕು: ಅಂಕಲಗಿ

ಸುರಪುರ: ಲೋಕ ಸಭಾ ಚುನಾವಣೆಯ ಅಂಗವಾಗಿ ನೀತಿ ಸಂಹಿತೆ ಇರುವುದರಿಂದ ಸರಕಾರದ ವತಿಯಿಂದ ಆಚರಿಸಲಪಡುವ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ ಸುರೇಶ ಅಂಕಲಗಿ ತಿಳಿಸಿದರು.

ನಗರದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶನಿವಾರ ಶ್ರೀ ಜಗಜ್ಯೋತಿ ಬಸವೇಶ್ವರರ, ಶ್ರೀ ಮದಾಧ್ಯ ಜಗದ್ಗುರು ಶಂಕರಾಚಾರ್ಯರ ಸೇರಿದಂತೆ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅರ್ಧಯಕ್ಷತೆ ವಹಿಸಿ ಮಾತನಾಡಿದ ಅವರು ಸರಕಾರವು ಮಹನೀಯರ ಜೀವನವನ್ನು ಆದರ್ಶವಾಗಿಟ್ಟುಕೊಳಲು ಅವರ ಜಯಂತಿಯನ್ನು ಆಚರಿಸುವುದರ ಮೂಕಾಂತರ ಅವರ ಸಾಧನೆಗೆ ಹಾಗೂ ಅವರ ಆದರ್ಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಲು ಈ ಜಯಂತಿಗಳನ್ನು ಆಚರಿಸುವಂತೆ ಆದೇಶಿಸಿದ ಹಿನ್ನಲೆಯಲ್ಲಿ ಮೇ.07 ರಂದು ಶ್ರೀ ಜಗಜ್ಯೋತಿ ಬಸವೇಶ್ವರರ, ಮೇ.09 ರಂದು ಶ್ರೀ ಮದಾರ್ಧಯ ಜಗದ್ಗುರು ಶಂಕರಾಚಾರ್ಯರ, ಮೇ.10 ರಂದು ಶ್ರೀ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಮತ್ತು ಮೇ.11 ರಂದು ಶ್ರೀ ಭಗೀರಥ ಮಹರ್ಷಿಗಳ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ತಾಳೂಕು ಕಚೇರಿಯ ಸಬಾಂಗಣದಲ್ಲಿ ಬೇಳಿಗ್ಗೆ 10 ಗಂಟೆಗೆ ಆಚರಿಸಲಾಗುವುದು ಆ ದಿನಗಳಂದು ನಡೆಯುವ ಕಾರ್ಯಕ್ರಮಗಳಿಗೆ ಸಮಾಜದ ಮುಖಂಡರು ಹಾಗೂ ಸಂಘಟನೆಯ ಮುಖಂಡರುಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ತಿಳಿಸಿದರು.

ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸುರೇಶ ಸಜ್ಜನ, ನ್ಯಾಯವಾದಿ ಜಿ.ಹೆಚ್ಚ್.ಪಾಟೀಲ, ಸುಗುರೇಶ ವಾರದ, ವೀರಪ್ಪ ಅವಂಟಿ, ಶಿವಶರಣಪ್ಪ ಹೆಡಗಿನಾಳ, ಮಂಜುನಾಥ ಜಾಲಹಳ್ಳಿ, ಸಂಗಣ್ಣ ಯಕ್ಕಳ್ಳಿ, ನಗರಸಭೆ ಸದಸ್ಯ ಮಹೇಶ ಪಾಟೀಲ, ವಿರೇಶ ಪಂಚಾಂಗಮಠ, ಶರಣಪ್ಪ ಕಳ್ಳಿಮನಿ, ವಿರೇಶ ಮಾಟ್ನೂರು, ಚಂದ್ರಶೇಖರ ಡೊಣ್ಣುರು, ದೇವಿದಾಸಭಟ ಗಡ್ಡದ, ನಾಗರಾಜ ಹಾಲಗಿರಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago