ಕಲಬುರಗಿ: ಬಿಸಿಲು ನಗರಿಯೆಂದೇ ಖ್ಯಾತಿ ಪಡೆದ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಕಡು ಬಿಸಿಲಿನಲ್ಲಿ ಟ್ರಾಫಿಕ್ ಸಿಗ್ನಲ್ ನಲ್ಲಿ ಸಮಯ ಕಳೆಯುವುದ ಕಷ್ಟ ಇವಿದ್ದು, ಸಿಗ್ನಲ್ ಗಳಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ಹಸಿರು ಹೊದಿಕೆ ಅಳವಡಿಸಬೇಕೆಂದು ಎಐಡಿಎಸ್ಒ ಸಂಘಟನೆಯ ನಗರಾಧ್ಯಕ್ಷ ಭೀಮಾಶಂಕರ ಪಾಣೇಗಾಂವ ಆಗ್ರಹಿಸಿದ್ದಾರೆ.
ನಗರದಲ್ಲಿ ಜನದಟ್ಟನೆಯ ಪ್ರದೇಶವಾಗಿದ ನಗರ ಪ್ರತಿ ದಿನ ಸಾವಿರಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತವೆ. ಬೇಸಿಗೆಯ ಕಡು ಬಿಸಿಲಿನಲ್ಲಿ ಟ್ರಾಫಿಕ್ ಸಿಗ್ನಲನಲ್ಲಿ 2-3 ನಿಮಿಷ ನಿಂತು ಹೊಗುವುದು ಅತ್ಯಂತ ಕಷ್ಟರವಾಗಿದೆ. ಬಿಸಿಲಿನ ಶಾಖ ಸೂರ್ಯನ ಪ್ರಖರತೆ ಇನ್ನು ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಂಭವ ಕೂಡಾ ಇದೆ. ಇಂತಹ ಪರಿಸ್ಥಿಯಲ್ಲಿ ಮಹಾನಗರ ಪಾಲಿಕೆ ನಗರದ ಜನತೆಗೆ ಪ್ರಮುಖ ಟ್ರಾಫಿಕ್ ಸಿಗ್ನಲ್‌ನಲ್ಲಿ ಕೆಂಡ ಕಾರುವ ರಣ ಬಿಸಿಲಿನ ರಕ್ಷಣೆ ಪಡೆಯಲು ವಾಹನಗಳು ನಿಲ್ಲುವ ಸಿಗ್ನಲ್ ಸ್ಥಳದ ರಸ್ತೆಯ ಮೇಲ್ಬಾಗದಲ್ಲಿ ಹಸಿರು ಹೊದಿಕೆ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಯೋಜನೆ ಈಗಾಗಲೇ ಆಂಧ್ರದ ಕರ್ನೂಲ್ ಹಾಗೂ ಕರ್ನಾಟಕದ ವಿಜಯಪುರ, ನಗರದಲ್ಲಿ ಹಸಿರು ಹೊದಿಕೆ ವ್ಯವಸ್ಥೆ ಮಾಡಿ ವಾಹನ ಚಾಲಕರಿಗೆ ನೆರಳಿನ ಅನುಕೂಲ ಮಾಡಿಕೊಟ್ಟಿದ್ದಾರೆ. ಯೋಜನೆಗೆ ಸ್ಥಳೀಯ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಅದೇ ಮಾದರಿಯಲ್ಲಿ ಕಲಬುರಗಿ ನಗರದಲ್ಲಿ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…