ಎಸ್‌ಆರ್‌ಜಿ ಫೌಂಡೇಶನನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

0
236

ಆಳಂದ: ಪಟ್ಟಣದ ಎಸ್‌ಆರ್‌ಜಿ ಫೌಂಡೇಷನ್ ಮತ್ತು ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ರಾಘವೇಂದ್ರ ಚಿಂಚನಸೂರ, ಪ್ರಜಾತಂತ್ರ ವ್ಯವಸ್ಥೆ ಬಲಗೊಳ್ಳಬೇಕಾದರೆ ಜನರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಸಂವಿಧಾನಕ್ಕೆ ಅನುಗುಣವಾಗಿ ನಡೆಯುವುದು ಮುಖ್ಯವಾಗಿದೆ ಎಂದು ಹೇಳಿದರು.

ಭಾರತೀಯ ಸಂವಿಧಾನವು ಯಾರಿಗೂ ತಾರತಮ್ಯ ಮಾಡದೇ ಎಲ್ಲರಿಗೂ ಸಮಾನ ಅವಕಾಶಗಳನ್ನು ಕೊಟ್ಟಿದೆ ಅವುಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಕ್ತ ಮತ್ತು ಪಾರದರ್ಶಕ ವ್ಯವಸ್ಥೆ ಇರುವುದರಿಂದಲೇ ಇವತ್ತು ಜಗತ್ತಿನಲ್ಲಿ ಭಾರತ ಗುರುತಿಸಿಕೊಳ್ಳುವಂತಾಗಿದೆ ಎಂದು ಅಭಿಪ್ರಾಯಪಟ್ಟರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಅಶೋಕರೆಡ್ಡಿ, ಪದವಿ ಕಾಲೇಜಿನ ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ, ಎಸ್.ಆರ್.ಜಿ ಆಂಗ್ಲ್ ಮಾಧ್ಯಮ ಶಾಲೆಯ ಮುಖ್ಯಗುರು ಜೆಎನ್‌ಎಸ್ ಕಿರಣ್ಮಯಿ ಸೇರಿದಂತೆ ಉಭಯ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಸಾಲೇಗಾಂವನ ಕರಬಸಪ್ಪ ಬೆಳ್ಳೆ ಸ್ಮಾರಕ ಪ್ರೌಢಶಾಲೆಯಲ್ಲಿ ಮುಖ್ಯಗುರು ಶಶಿಕಾಂತ ಭೂಸುಣಗೆ, ತಡಕಲನ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಪ್ರೌಢಶಾಲೆಯಲ್ಲಿ ಮುಖ್ಯಗುರು ರಾಜಕುಮಾರ ಚಿಚಕೋಟಿ, ಮೋಘಾ(ಬಿ)ಯ ಎಸ್ ಎಸ್ ಧೋತ್ರೆ ಸ್ಮಾರಕ ಪ್ರೌಢಶಾಲೆಯಲ್ಲಿ ಮುಖ್ಯಗುರು ಸಿದ್ದಾರಾಮ ಧೋತ್ರೆ, ಸಕ್ಕರಗಾದ ಮಾತೋಶ್ರೀ ರಾಮವ್ವ ನಿಂಗಯ್ಯ ಗುತ್ತೇದಾರ ಪ್ರೌಢಶಾಲೆಯಲ್ಲಿ ಮುಖ್ಯಗುರು ಶರಣಬಸಪ್ಪ, ಆಳಂದನ ಮಾತೋಶ್ರೀ ಗಂಗಮ್ಮ ಮೊಗಲಯ್ಯ ಗುತ್ತೇದಾರ ಕನ್ಯಾ ಪ್ರೌಢಶಾಲೆಯಲ್ಲಿ ಮುಖ್ಯಗುರು ಮಲ್ಲಿಕಾರ್ಜುನ ಬುಕ್ಕೆ, ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಪ್ರೌಢಶಾಲೆಯಲ್ಲಿ ಮುಖ್ಯಗುರು ಕಲ್ಯಾಣಿ ತುಕಾಣೆ, ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಪ್ರಾಥಮಿಕ ಶಾಲೆಯಲ್ಲಿ ಸೂರ್ಯಕಾಂತ ಬಿರಾದಾರ, ಕಾಯಕ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಸೂರ್ಯಕಾಂತ ಧ್ವಜಾರೋಹಣ ನೇರವೆರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here